ಅಪಘಾತಕ್ಕೆ ತುತ್ತಾದ ನವದಂಪತಿ: ಪತ್ನಿ ಮೃತ್ಯು,ಪತಿ ಗಂಭೀರ

Picture of RB NEWS

RB NEWS

Bureau Report

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೊಳಗಾಗಿ ನವವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರವಾಗಿ ಗಾಯಗೊಂಡ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ಇಂದು ಸಂಭವಿಸಿದೆ.

ಬಿಸಿರೋಡಿನ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನದಂಪತಿಗಳ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಮಾನಸ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಗೂ ಅನಿಶ್ ಕೃಷ್ಣ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು ಎನ್ನಲಾಗಿದೆ.

ಇನ್ನು ಇವರಿಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top