ಅರವಿಂದರ್ ಸಿಂಗ್ ಲವ್ಲಿ ಬಿಜೆಪಿ ಸೇರ್ಪಡೆ

Picture of RB NEWS

RB NEWS

Bureau Report

ನವದೆಹಲಿ : ದೆಹಲಿಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. 

ಅರವಿಂದರ್ ಸಿಂಗ್ ಲವ್ಲಿ ಅವರೊಂದಿಗೆ ಮಾಜಿ ಶಾಸಕರಾದ ರಾಜ್ ಕುಮಾರ್ ಚೌಹಾಣ್, ನಸೀಬ್ ಸಿಂಗ್, ನೀರಜ್ ಬಸೋಯಾ ಮತ್ತು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಮಿತ್ ಮಲಿಕ್ ಕೂಡ ಬಿಜೆಪಿಗೆ ಸೇರಿದ್ದಾರೆ. 

ಆಮ್ ಆದ್ಮಿ (ಎಎಪಿ) ಪಕ್ಷದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವುದನ್ನು ಖಂಡಿಸಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ವೇಳೆ ತಮ್ಮ ರಾಜೀನಾಮೆ, ಹುದ್ದೆಗೆ ಮಾತ್ರವೇ ಹೊರತು, ಪಕ್ಷಕ್ಕಲ್ಲ ಎಂದು ತಿಳಿಸಿದ್ದರು. ಆದರೆ ಇದೀಗ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top