ಆದಿವಾಸಿ ಅಭಿವೃದ್ಧಿ ನಿಗಮದಲ್ಲಿ ಅರಣ್ಯ ಮೂಲ ಬುಡಕಟ್ಟುಗಳಿಗೆ ಆದ್ಯತೆ ನೀಡಲು ಆಗ್ರಹ

Picture of RB NEWS

RB NEWS

Bureau Report


ಬೆಂಗಳೂರು : ಕರ್ನಾಟಕದಲ್ಲಿ ಆದಿವಾಸಿ ಸಮುದಾಯಗಳ ಸಮಗ್ರ ಅಭಿವೃದ್ಧಿಯನ್ನು ಉದ್ದೇಶಿಸಿಕೊಂಡು ಘೋಷಣೆಯಾಗಿರುವ ಆದಿವಾಸಿ ಅಭಿವೃದ್ಧಿ ನಿಗಮದಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯದವರಿಗೆ ಅಧ್ಯಕ್ಷರು ಹಾಗೂ ನಿರ್ದೇಶಕರಾಗಿ ಅವಕಾಶ ನೀಡಬೇಕು ಎಂಬ ಆಗ್ರಹ ಕೇಳಿಬಂದಿದೆ.
ಕಳೆದ ಹಲವು ವರ್ಷಗಳಿಂದ ನಡೆದ ನಿರಂತರ ಹೋರಾಟದ ಫಲವಾಗಿ ಈ ನಿಗಮ ಸ್ಥಾಪನೆ ಘೋಷಣೆಗೊಂಡಿದ್ದು, ಇದರ ನೇತೃತ್ವ ನೈಜ ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರ ಕೈಯಲ್ಲೇ ಇರಬೇಕು ಎಂದು ಒತ್ತಾಯಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಕೆಲವು ಪ್ರದೇಶಗಳಲ್ಲಿ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ಪಡೆದು ತಾವು ಮೂಲ ಆದಿವಾಸಿಗಳೆಂದು ಹೇಳಿಕೊಂಡು ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವ ಘಟನೆಗಳು ಮೇಲ್ನೋಟಕ್ಕೆ ಗೋಚರಿಸುತ್ತಿವೆ ಎಂಬ ಆರೋಪವೂ ವ್ಯಕ್ತವಾಗಿದೆ.
ಇಂತಹ ಬೆಳವಣಿಗೆಗಳಿಂದ ನೈಜ ಆದಿವಾಸಿಗಳಿಗೆ ಸಿಗಬೇಕಾದ ಸರಕಾರಿ ಹುದ್ದೆಗಳು, ರಾಜಕೀಯ ಅಧಿಕಾರ ಹಾಗೂ ವಿವಿಧ ಸೌಲಭ್ಯಗಳು ದುರುಪಯೋಗವಾಗುವ ಸಾಧ್ಯತೆ ಇದೆ. ಪರಿಶಿಷ್ಟ ಪಂಗಡದೊಳಗೇ ಕೆಲವೇ ಸಮುದಾಯಗಳ ಕೈಯಲ್ಲಿ ಅಧಿಕಾರ ಕೇಂದ್ರೀಕೃತವಾಗಿರುವುದರಿಂದ ಅನೇಕ ಅರಣ್ಯಾಧಾರಿತ ಸಮುದಾಯಗಳಿಗೆ ಅವಕಾಶಗಳು ಸಿಗುವುದೇ ಕಷ್ಟವಾಗುತ್ತಿದೆ ಎಂಬ ಆತಂಕ ವ್ಯಕ್ತಪಡಿಸಲಾಗಿದೆ.
ಈ ಹಿನ್ನೆಲೆದಲ್ಲಿ ಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಅಧಿಕೃತ 12 ಬುಡಕಟ್ಟು ಸಮುದಾಯಗಳಿಗೆ ಸಮರ್ಪಕ ಸ್ಥಾನಮಾನ ನೀಡುವ ಮೂಲಕ ನೈಜ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಲಾಗಿದೆ. ಒಳ ಮೀಸಲಾತಿ ಜಾರಿಗೆ ತರಲು ಮುಂದಾದಾಗ ಅರಣ್ಯ ವಾಸಿಗಳಿಗೆ ಅನ್ಯಾಯವಾಗದಂತೆ ಹೆಚ್ಚು ಅವಕಾಶಗಳನ್ನು ಕಲ್ಪಿಸುವುದು ಸರ್ಕಾರದ ಮುಂದಿರುವ ಪ್ರಮುಖ ಸವಾಲಾಗಿದೆ ಎಂದು ತಿಳಿಸಲಾಗಿದೆ.
ಈ ವಿಷಯದ ಕುರಿತು ಸಮಗ್ರ ಚರ್ಚೆ ನಡೆಸಲು ಅರಣ್ಯಾಧಾರಿತ 12 ಸಮುದಾಯಗಳ ಪ್ರತ್ಯೇಕ ಸಭೆಯನ್ನು ಕರೆಯಬೇಕು ಎಂಬ ಸಲಹೆಯೂ ನೀಡಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯ ಅರಣ್ಯ ಮೂಲ ಬುಡಕಟ್ಟು ಒಕ್ಕೂಟಗಳ ಕೋರ್ ಕಮಿಟಿ ಸದಸ್ಯರು ಹಾಗೂ ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top