ಆಲದಪದವು: ಕೀರ್ತೇಶ್ ಕೆ ಅವರಿಗೆ ಚಾಂಪಿಯನ್‌ಶಿಪ್ ಪ್ರಶಸ್ತಿ

Picture of RB NEWS

RB NEWS

Bureau Report


ಮಂಗಳೂರು : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಜನಸಂಗಮ, ಬೆಳಗಾವಿ–ತುಮಕೂರು ಇವರ ವತಿಯಿಂದ 2026–27ನೇ ಸಾಲಿನ ಅಂತರ್ ಕಾಲೇಜು ರಾಜ್ಯಮಟ್ಟದ ಪಂದ್ಯಾವಳಿಯನ್ನು ಆಯೋಜಿಸಲಾಯಿತು. ಈ ಪಂದ್ಯಾವಳಿಯಲ್ಲಿ ಟೇಕ್‌ವುಂಡ್ ಕರಾಟೆ ವಿಭಾಗದಲ್ಲಿ ಮೂಡುಬಿದಿರೆಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಕೀರ್ತೇಶ್ ಕೆ ಅವರು ಚಾಂಪಿಯನ್‌ಶಿಪ್ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಕೀರ್ತೇಶ್ ಕೆ ಅವರ ಈ ಸಾಧನೆಯಿಂದ ನಮ್ಮ ಜಿಲ್ಲೆಗೆ ಕೀರ್ತಿ ತಂದುಕೊಟ್ಟಿದ್ದಾರೆ. ಕ್ರೀಡೆಯಲ್ಲಿ ತಮ್ಮ ಪ್ರತಿಭೆ ಮತ್ತು ಶ್ರಮದ ಮೂಲಕ ರಾಜ್ಯಮಟ್ಟದಲ್ಲಿ ಮೆರೆದಿರುವುದು ವಿಶೇಷವಾಗಿದೆ.
ಇವರು ದಿವಂಗತ ಕಿಶೋರ್ ಮತ್ತು ಅನ್ನಪೂರ್ಣೇಶ್ವರಿ ದಂಪತಿಯ ಪುತ್ರರಾಗಿದ್ದು, ರಝಾನಗರದ ಬುರೂಜ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ಹೆಮ್ಮೆಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ.
ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲಿ ಸಾಧನೆ ಮಾಡುತ್ತಿರುವ ಕೀರ್ತೇಶ್ ಅವರ ಯಶಸ್ಸು ಯುವಜನತೆಗೆ ಪ್ರೇರಣೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆಗಳನ್ನು ಮಾಡಲಿ ಎಂಬುದು ಎಲ್ಲರ ಆಶಯವಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top