ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಕಾರ್ಕಳ ಇದರ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ ಪ್ರೌಡ ಶಾಲಾ ವಿಭಾಗದ 10 ನೇ ತರಗತಿಯ ಕನ್ನಡ ವಿಭಾಗದ ವಿದ್ಯಾರ್ಥಿಗಳಿಗೆ 3 ತಿಂಗಳ ಕಾಲ ನಡೆದ ತರಬೇತಿ ತರಗತಿಯ ಸಂಪನ್ನಗೊಂಡಿತು.
ಸಮಾರೋಪ ಕಾರ್ಯಕ್ರಮ ವನ್ನು ತರಗತಿ ಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ ರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಈ ರೀತಿಯಲ್ಲಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ. ಎಸ್ ಎಸ್ ಎಲ್ ಸಿ ಪರೀಕ್ಷೆ ಜೀವನದ ಮಹತ್ವ ಘಟ್ಟ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಡ ಶಾಲಾ ವಿಭಾಗ ದ ಮುಖ್ಯಶಿಕ್ಷಕ ಬಸವರಾಜು ವಹಿಸಿದ್ದರು.
ಕಾರ್ಯಕ್ರಮದಲ್ಲಿ ತಾಲೂಕು ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸವಿತಾ, ಶಿಕ್ಷಕರಾದ ಗಣಪತಿ ನಾಯಕ್, ವನಿತಾ, ವೀಣಾ, ಸೇವಾ ಪ್ರತಿನಿಧಿ ಪ್ರಭಾವತಿ, ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ನವೀನ್ ಉಪಸ್ಥಿತರಿದ್ದರು.






































