ಕಾರ್ಕಳ ಕಾಂಗ್ರೆಸ್ ವತಿಯಿಂದ ಹೊನಲು ಬೆಳಕಿನ ಅಥ್ಲೆಟಿಕ್ ಕ್ರೀಡಾಕೂಟ ಹಾಗೂ ಪಂದ್ಯಾಕೂಟ

Picture of RB NEWS

RB NEWS

Bureau Report

ಕಾರ್ಕಳ : ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳ- ಹೆಬ್ರಿ ಮತ್ತು ಯುವ ಕಾಂಗ್ರೆಸ್ ಸಮಿತಿ ಕಾರ್ಕಳ ಆಶ್ರಯದಲ್ಲಿ ಕ್ಷೇತ್ರದ ಕ್ರೀಡಾಪಟುಗಳನ್ನು ಗುರುತಿಸುವ ಮತ್ತು‌ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರಿಗೆ ಪ್ರಪ್ರಥಮ ಬಾರಿಗೆ ಹೊನಲು ಬೆಳಕಿನ ಅಥ್ಲೆಟಿಕ್ ಕ್ರೀಡಾಕೂಟ ಹಾಗೂ ಪಂದ್ಯಾಕೂಟವನ್ನು ಜನವರಿ 25, 26 ರಂದು ಸಂಜೆ 4 ಗಂಟೆಯಿಂದ ಕಾರ್ಕಳ ಸ್ವರಾಜ್ಯ ಮೈದಾನದಲ್ಲಿ ಆಯೋಜಿಸಲಾಗಿದೆ.

ಉದ್ಘಾಟನೆಗೆ ಅತಿಥಿ ಗಣ್ಯರು
ಕ್ರೀಡಾಕೂಟದ ಉದ್ಘಾಟನೆಯನ್ನು ಕಾಂಗ್ರೆಸ್ ಹಿರಿಯ ಮುಖಂಡರು ಮಾಜಿ‌ ಮುಖ್ಯಮಂತ್ರಿ ವೀರಪ್ಪ ಮೊಯಿಲಿಯವರು ನಡೆಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಜ್ಯ ಸರಕಾರ ಉಪ ಮುಖ್ಯಮಂತ್ರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಚಿವರುಗಳಾದ, ಸಂತೋಷ್ ಲಾಡ್, ಕೃಷ್ಣ ಬೈರೆಗೌಡ, ಶಾಸಕ ಮಂಜುನಾಥ್ ಭಂಡಾರಿ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ,‌ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ನಾರಾಯಣ ಗುರು ನಿಗಮ ಅಧ್ಯಕ್ಷ ಮಂಜುನಾಥ್ ಪೂಜಾರಿ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ ಎ, ಗಫೂರ್, ಉಡುಪಿ ಉಸ್ತುವಾರಿ ಐವನ್ ಡಿಸೋಜಾ ಹಾಗೂ ಅನೇಕ ಗಣ್ಯರು ಭಾಗವಹಿಸಲಿದ್ದು ಕ್ರೀಡಾ ಸಾಧಕರಿಗೆ ಸನ್ಮಾನ‌ ನಡೆಯಲಿದೆ.

ಸುದ್ಧಿಗೋಷ್ಠಿಯಲ್ಲಿ ಉಪಸ್ಥಿತಿ: ಕಾಂಗ್ರೇಸ್ ಮುಖಂಡ ಉದಯ್ ಶೆಟ್ಟಿ ‌ಮುನಿಯಾಲು, ಬ್ಲಾಕ್ ಆದ್ಯಕ್ಷ ಶುಭದರಾವ್, ಹೆಬ್ರಿ ಬ್ಲಾಕ್ ಅಧ್ಯಕ್ಷ ಗೋಪಿನಾಥ್ ಭಟ್, ಯುವಕಾಂಗ್ರೆಸ್ ಅಧ್ಯಕ್ಷ ಸೂರಜ್ ನಕ್ರೆ, ಮಲ್ಲಿಕ್ ಅತ್ತೂರು, ಮಾಜಿ ಪುರಸಭಾ ಅಧ್ಯಕ್ಷರಾದ ಸುಬಿತ್ ಕುಮಾರ್ , ಬ್ಲಾಕ್ ಪ.ಕಾರ್ಯದರ್ಶಿ ವಿವೇಕ್ ಶೆಣೈ .

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top