ಕಾರ್ಕಳ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ-ಹಿ-ಸೇವಾ ಅಭಿಯಾನ 2024
ಕಾರ್ಕಳ : ಕಾನೂನು ಸೇವೆಗಳ ಸಮಿತಿ ಕಾರ್ಕಳ ಹಾಗೂ ನ್ಯಾಯವಾದಿಗಳ ಸಂಘ (ರಿ.) ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಸ್ವಚ್ಛತಾ-ಹಿ-ಸೇವಾ ಅಭಿಯಾನ 2024 ಕಾರ್ಯಕ್ರಮವು ಕಾರ್ಕಳ ನ್ಯಾಯಲಯದ ಆವರಣದಲ್ಲಿ ಜರಗಿತು.
ಹಿರಿಯ ಸಿವಿಲ್ ಮತ್ತು ಎ.ಸಿ.ಜೆ.ಯಂ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಇದರ ಅಧ್ಯಕ್ಷರಾದ ಶರ್ಮಿಳಾ ಸಿ.ಎಸ್. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಸಮಿತಿ ಕಾರ್ಕಳ ಇದರ ಸದಸ್ಯ ಕಾರ್ಯದರ್ಶಿ ಕೋಮಲ ಆರ್.ಸಿ. ಹಾಗೂ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಅಬುತಾಹಿರ್, ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ನಿಟ್ಟೆ ಹಾಗೂ ನ್ಯಾಯವಾದಿಗಳು ನ್ಯಾಯಲಯದ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಸಕ್ರಿಯಾವಾಗಿ ಪಾಲ್ಗೊಂಡರು.





















