ಗೋಪಾಲ್ ಜೋಶಿ ಅವರೊಂದಿಗೆ ನನ್ನ ಹೆಸರು ಲಿಂಕ್ ಮಾಡಬಾರದು ಎಂದು  ನಾನು ಹಿಂದೆಯೇ ಕೋರ್ಟ್‌ನಿಂದ ಆದೇಶ ತಂದಿದ್ದೇನೆ- ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Picture of RB NEWS

RB NEWS

Bureau Report

ಗೋಪಾಲ್ ಜೋಶಿಯವರ ವಿರುದ್ಧ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವ ಆಮಿಷ ತೋರಿಸಿ 2 ಕೋಟಿ ರೂ. ವಂಚಿಸಿದ ಆರೋಪಕ್ಕೆಸಂಬಂಧಿಸಿದಂತೆ ದೆಹಲಿಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ವೇಳೆ ನನ್ನ ಸಹೋದರನ ಮೇಲೆ ಎಫ್‌ಐಆರ್ ದಾಖಲಾಗಿದೆ. ಇಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ್ದಾರೆ.


ನನಗೆ ಯಾರೂ ಸಹೋದರಿ ಇಲ್ಲ. ನಾವು ನಾಲ್ಕು ಜನ ಸಹೋದರರು, 1984 ರಲ್ಲಿ ಒಬ್ಬ ಸಹೋದರ ತೀರಿ ಹೋದರು. ಈಗ ಮೂವರು ಸಹೋದರರು ಇದ್ದೇವೆ. ಗೋಪಾಲ್ ಜೋಶಿ ಅವರು ನನ್ನ ಹಿರಿಯ ಸಹೋದರ ಇದರ ಜೊತೆಗೆ ಸಹೋದರಿ ಅಂತಲೂ ಬರುತ್ತಿದೆ ಅವರು ಯಾರು ಗೊತ್ತಿಲ್ಲ ಎಂದಿದ್ದಾರೆ.

ನನ್ನ ಹಿರಿಯ ಸಹೋದರ ಗೋಪಾಲ್ ಜೋಶಿ ಅವರು ನಾನು ಬೇರೆಯಾಗಿ 33 ವರ್ಷಗಳು ಕಳೆದಿವೆ. ಈ ಹಿಂದೆಯೂ ಅವರ ವಿರುದ್ಧ ಎರಡು ಸಲ ಆರೋಪ ಕೇಳಿ ಬಂದಿತ್ತು. ಅದಕ್ಕಾಗಿ ನಾನು ಹಿಂದೆಯೇ ಗೋಪಾಲ್ ಜೋಶಿ ಅವರೊಂದಿಗೆ ನನ್ನ ಹೆಸರು ಲಿಂಕ್ ಮಾಡಬಾರದು ಎಂದು ಕೋರ್ಟ್‌ನಿಂದ ಆದೇಶ ತಂದಿದ್ದೇನೆ. ಸಾಮಾಜಿಕವಾಗಿ ಆರ್ಥಿಕವಾಗಿ ಯಾವುದೇ ಸಂಬಂಧ ಇಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.


ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top