ಗೋ ಹಂತಕನಿಗೆ ಗುಂಡೇಟು

Picture of RB NEWS

RB NEWS

Bureau Report

ಹೊನ್ನಾವರ : ಗಬ್ಬ ಹಸುವಿನ ಕಾಲು, ತಲೆ ಕಡಿದು ಅದರ ಹೊಟ್ಟೆಯಲ್ಲಿದ್ದ ಕರುವನ್ನು ಹೊರಗೆಸೆದು ಮಾಂಸ ಕದ್ದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಕನ್ನಡದ ಹೊನ್ನಾವರದ ಸಾಲ್ನೋಡುವಿನ ಕೊಂಡಕುಳಿ ಗ್ರಾಮದಲ್ಲಿ ಗೋವಿನ ಹತ್ಯೆ ನಡೆದಿತ್ತು.

ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಫೈಝಲ್ ನನ್ನು ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ.

ಹೊನ್ನಾವರದ ಕಾಸರಕೋಡಿನಲ್ಲಿ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಿದ ಫೈಝಲ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದನು.

ಅದೇ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಹಾರಿಸಿದ ಗುಂಡು ಆರೋಪಿ ಫೈಝಲ್‌ ದೇಹ ಸೇರಿದೆ.
ಸದ್ಯ ಗಾಯಗೊಂಎ ಆರೋಪಿಯನ್ನು ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.

ನಿನ್ನೆಯಷ್ಟೇ ಪೊಲೀಸರು ಹೊನ್ನಾವರ ವಲ್ಕಿಯ 41 ವರ್ಷದ ತೌಫೀಕ್‌ನನ್ನು ಬಂಧಿಸಿದ್ದರು. ಇದಕ್ಕೂ ಮುನ್ನ ಪೊಲೀಸರು ಆರೋಪಿಗಳಾದ ಹೊನ್ನಾವರದ ಅಲ್ತಾಫ್ ಕಟಪುರುಸು, ಮಥಿನ್ ಕಟಪುರುಸು ಮೊಹಮ್ಮದ್ ಹುಸೇನ್ ಖುರ್ವೆ ಎಂಬುವರನ್ನು ಬಂಧಿಸಿದ್ದರು.

ಹೊನ್ನಾವರ ತಾಲೂಕಿನ ಸಾಲಕೋಡಿನ ಕೊಂಡಾಕುಳಿಯಲ್ಲಿ ಬೆಟ್ಟಕ್ಕೆ ಮೇಯಲು ಜನವರಿ 18ರಂದು ಹೋಗಿದ್ದ ಗರ್ಭಿಣಿ ಹಸುವಿನ ಕಾಲು, ರುಂಡ ಕಡಿದು, ಗರ್ಭದಲ್ಲಿ ಬೆಳೆಯುತ್ತಿದ್ದ ಕರುವಿನ ಭ್ರೂಣ ಹೊರತೆಗೆದು ಹತ್ಯೆ ಮಾಡಲಾಗಿತ್ತು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top