ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸಮೃದ್ಧಿ ರಾವ್

Picture of RB NEWS

RB NEWS

Bureau Report

ಉಡುಪಿ : ಉಪ ನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಇವರು ಆಯೋಜಿಸಿದ ಉಡುಪಿ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ನಿಟ್ಟೆ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ ರಾವ್ ರವರು ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಉಡುಪಿ ಅಜ್ಜರ ಕಾಡು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ನಿಟ್ಟೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ ರಾವ್ 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದಿರುತ್ತಾರೆ.

1500 ಮೀಟರ್ ಓಟದಲ್ಲಿ ದ್ವಿತೀಯ,3000 ಸಾವಿರ ಮೀಟರ್ ಓಟದಲ್ಲಿ ದ್ವಿತೀಯ. 3 ಕಿ.ಮೀ ಮ್ಯಾರಥಾನ್ ನಲ್ಲಿ ದ್ವಿತೀಯ, 4×100 ಮೀಟರ್ ರಿಲೇಯಲ್ಲಿ ದ್ವಿತೀಯ 4×400 ರಿಲೇಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಒಂದು ಚಿನ್ನದ ಪದಕ 5 ಬೆಳ್ಳಿ ಪದಕವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಇವರು ಕಾರ್ಕಳ ಶ್ರೀ ಕಾಳಿಕಾಂಬ ದೇವಸ್ಥಾನದ ಬಳಿಯ ಕಾರ್ಕಳ ಪುರಸಭೆಯ ನಾಮನಿರ್ದೇಶಿತ ಮಾಜಿ ಸದಸ್ಯ ಸಂತೋಷ್ ರಾವ್ ಹಾಗೂ ಸವಿತಾ ರಾವ್ ಅವರ ಪುತ್ರಿ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top