ಡಾ. ಸ್ವಾತಿ ಕೆಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪ್ರದಾನ

Picture of RB NEWS

RB NEWS

Bureau Report


ಕಾರ್ಕಳ: ಶ್ರೀ ಭುವನೇಂದ್ರ ಕಾಲೇಜಿನ ಕಂಪ್ಯೂಟರ್‌ಸೈನ್ಸ್ ವಿಭಾಗದ ಮುಖ್ಯಸ್ಥರಾದ ಡಾ. ಸ್ವಾತಿ ಕೆ ಅವರು ತಮ್ಮ ಮಹಾ ಪ್ರಬಂಧ “A2TM: Algorithms for Authentication of Digital Transactions based on Multi-biometrics” ಮೂಲಕ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ.
ಡಾ. ಸ್ವಾತಿ ಕೆ ತಮ್ಮ ಸಂಶೋಧನೆಯನ್ನು ಮಂಗಳೂರು ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಬಿ. ಎಚ್. ಶೇಖರ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.
ಡಾ. ಸ್ವಾತಿ ಕೆ ಕೆ. ಚಂದ್ರಶೇಖರ ರಾವ್ ಮತ್ತು ಜಯಂತಿ ಕೆ ಅವರ ಪುತ್ರಿ, ಹಾಗೂ ನಂದ ಕಿಶೋರ್ ಕೆ ಅವರ ಪತ್ನಿ ಆಗಿದ್ದು, ಅವರ ಈ ಸಾಧನೆಗೆ ಶ್ರೀ ಭುವನೇಂದ್ರ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಂಸ್ಥೆ ಹೃತ್ಪೂರ್ವಕ ಅಭಿನಂದನೆಗಳು ಅರ್ಪಿಸುತ್ತಿದೆ ಎಂದು ಕಾಲೇಜು ಪ್ರಾಚಾರ್ಯ ಡಾ. ಮಂಜುನಾಥ ಎ. ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top