ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಮಾಸ್ಟರ್ ಮೈಂಡ್ ರಾಕೇಶ್ ರಂಜನ್ ಅಲಿಯಾಸ್ ರಾಕಿ ಬಂಧನ
ನವದೆಹಲಿ: ವೈದ್ಯಕೀಯ ಕೋರ್ಸ್ ಪ್ರವೇಶಾತಿಗೆ ಸರ್ಕಾರದ ವತಿಯಿಂದ ನಡೆಸಲಾಗುವ ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ರಾಕೇಶ್ ರಂಜನ್ ಅಲಿಯಾಸ್ ರಾಕಿ ಎಂಬಾತನನ್ನು ಸಿಬಿಐ ಬಂಧಿಸಿದೆ. ಬಂಧಿತನನ್ನು ಕೋರ್ಟ್ 10 ದಿನಗಳ ಕಾಲ ಸಿಬಿಐ ಕಸ್ಟಡಿಗೆ ವಹಿಸಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಪಟ್ನಾ ಹಾಗೂ ಕಲ್ಕತ್ತಾದಲ್ಲಿ ದಾಳಿ ಮಾಡಲಾಗಿತ್ತು. ಈ ವೇಳೆ ಆರೋಪಿ ಸಿಬಿಐ ಬಲೆಗೆ ಬಿದ್ದಿದ್ದಾನೆ ಎಂದು ವರದಿಯಾಗಿದೆ. ಆದರೆ, ಆರೋಪಿಯನ್ನು ಎಲ್ಲಿ ಬಂಧಿಸಲಾಯಿತು ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 30ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ಮೈಂಡ್ ರಾಕಿಯನ್ನು
ಕಳೆದ ಜುಲೈ 9ರಂದು ಕೇವಲ 2 ದಿನಗಳ ಹಿಂದಷ್ಟೇ ಪೇಪರ್ ಸೋರಿಕೆ ಪ್ರಕರಣದಲ್ಲಿ ಮತ್ತಿಬ್ಬರನ್ನು ಸಿಬಿಐ ಬಂಧಿಸಿತ್ತು. ಬಂಧಿತರನ್ನು ಸನ್ನಿ ಕುಮಾರ್ ಮತ್ತು ಇನ್ನೊಬ್ಬ ನೀಟ್ ಅಭ್ಯರ್ಥಿಯ ತಂದೆ ರಂಜೀತ್ ಕುಮಾರ್ ಎಂದು ಗುರುತಿಸಲಾಗಿದೆ. ಸನ್ನಿಯನ್ನು ನಳಂದಾದಿಂದ ಬಂಧಿಸಲಾಗಿದ್ದರೆ, ರಂಜಿತ್ನನ್ನು ಗಯಾದಲ್ಲಿ ಬಂಧಿಸಲಾಗಿತ್ತು.
ನೀಟ್-ಯುಜಿ ಪರೀಕ್ಷೆಯನ್ನು ಮೇ 5 ರಂದು ಭಾರತದಾದ್ಯಂತ ನಡೆಸಲಾಯಿತು. ಅಂದಾಜು 24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ರಾಕೇಶ್ ರಂಜನ್ ಬಿಹಾರದಿಂದ ಬಂಧಿತ 9ನೇ ವ್ಯಕ್ತಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡದ ಗುಜರಾತ್ ಮತ್ತು ಡೆಹ್ರಾಡೂನ್ನಲ್ಲಿ ಹಲವರನ್ನು ಬಂಧಿಸಲಾಗಿದೆ.






































