ಪುತ್ತೂರು ಶಾಸಕ ಅಶೋಕ್ ರೈ ಸಹಿತ 17 ಮಂದಿ ವಿರುದ್ಧ ಪ್ರಕರಣ ದಾಖಲು

Picture of RB NEWS

RB NEWS

Bureau Report

ವಿಟ್ಲ (ದಕ್ಷಿಣ ಕನ್ನಡ): ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಕೇಪು ಗ್ರಾಮದಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ಶನಿವಾರ ದಾಳಿ ನಡೆಸಿದ್ದು, 16 ಜನರನ್ನು ವಶಕ್ಕೆ ಪಡೆದಿದ್ದಾರೆ. ಕೋಳಿ ಅಂಕಕ್ಕೆ ಬಳಸಿದ್ದ 22 ಹುಂಜಗಳನ್ನು ಹಾಗೂ ಬಾಲುಗಳನ್ನು (ಚೂಪಾದ ಕತ್ತಿಗಳನ್ನು) ವಶಪಡಿಸಿಕೊಂಡಿದ್ದಾರೆ.

ಕೋಳಿ ಅಂಕದ ಸ್ಥಳದಲ್ಲಿ ಹಾಜರಿದ್ದ ಹಾಗೂ ಕಾನೂನು ಬಾಹಿರವಾದ ಕೋಳಿ ಅಂಕವನ್ನು ಮುಂದುವರಿಸುವಂತೆ ಜನರನ್ನು ಪ್ರಚೋದಿಸಿ ದುಷ್ಟೇರಣೆ ನೀಡಿದ ಆರೋಪದ ಮೇಲೆ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧವೂ ಎಫ್‌ಐಆ‌ರ್ ದಾಖಲಿಸಿಕೊಂಡಿದ್ದಾರೆ.

ಯಾವುದೇ ಪರವಾನಗಿ ಪಡೆಯದೇ, ಕಾನೂನು ಬಾಹಿರ ಕೃತ್ಯಕ್ಕೆ ಅನುವು ಮಾಡಿಕೊಟ್ಟ ಆರೋಪದ ಮೇಲೆ ಜಾಗದ ಮಾಲೀಕ ಮರಳೀಧರ ರೈ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top