ಪ್ರಾಚೀನ ಕಾಲದಿಂದಲೂ ಸಮಾಜದಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನ : ನ್ಯಾಯಾಧೀಶ ಎ. ಸಮಿಯುಲ್ಲಾ

Picture of RB NEWS

RB NEWS

Bureau Report

ಕಾರ್ಕಳ : ಪ್ರಾಚೀನ ಕಾಲದಿಂದಲೂ ಸಮಾಜದಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನ ನೀಡಿದೆ ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸಂಚಾರಿ ಪೀಠ ಕಾರ್ಕಳ ಇದರ ಸತ್ರ ನ್ಯಾಯಾಧೀಶರಾದ ಎ. ಸಮಿಯುಲ್ಲಾ ಹೇಳಿದರು.

ಕಾರ್ಕಳ ಬಾರ್ ಅಸೋಸಿಯೇಶನ್‌ನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ (ರಿ.), ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತಮಾಡಿದರು.

ಕಾರ್ಕಳ ನ್ಯಾಯವಾದಿಗಳ ಸಂಘ (ರಿ.) ಅಧ್ಯಕ್ಷ ಸುನೀಲ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ 2-3ದಶಕಗಳಿಂದ ಮಹಿಳೆಯರು ಎಲ್ಲಾ ರಂಗಗಳಲ್ಲಿಯೂ ಗಣನೀಯವಾಗಿ ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

ಗೌರವಾನ್ವಿತ ಹಿರಿಯ ಸಿವಿಲ್ ಮತ್ತು ಎ.ಸಿ.ಜೆ.ಎಮ್. ನ್ಯಾಯಾಧೀಶೆ ಶರ್ಮಿಳಾ ಸಿ.ಎಸ್. ಕಾರ್ಯಕ್ರಮ ನಿರೂಪಿಸಿದರು.

ಗೌರವಾನ್ವಿತ ಪ್ರಧಾನ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಧೀಶೆ ಕೋಮಲ ಆರ್.ಸಿ. ಮತ್ತು ಕಾರ್ಕಳದ ನ್ಯಾಯವಾದಿಗಳು ಉಪಸ್ಥಿತರಿದ್ದರು.

ಮಹಿಳೆಯರಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಬಗ್ಗೆ ನ್ಯಾಯವಾದಿಗಳು ವಿಸ್ತ್ರತವಾಗಿ ಮಾತನಾಡಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top