ಬಾಲಕನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ

Picture of RB NEWS

RB NEWS

Bureau Report

ಕಾರ್ಕಳ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನೊಬ್ಬ ಬಾಲಕನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಕಾರ್ಯಕ್ರಮದಲ್ಲಿ ಕಂಡುಬಂದ ಟ್ರೈಬಾ ಗಾರ್ಡನ್ ಮುಖ್ಯಸ್ಥ ಸಅದಿ ಕಿಲ್ಲೂರು (ಗುರುತಿಸಲಾಗಿದೆ)

ಸಾಮಾಜಿಕ ಜಾಲತಾಣಗಳಲ್ಲೂ ವಿಡಿಯೋ ಹರಿ ಬಿಟ್ಟು ಪೋಷಕರು ತಮ್ಮ ಅಳಲು ತೋಡಿಕೊಂಡಿದ್ದು ಜನರಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿದೆ. ಆರೋಪ ಹೊತ್ತಿರುವ ಸಅದಿ ಕಿಲ್ಲೂರು ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

ಸದ್ಯ ಜನಾಕ್ರೋಶ ವ್ಯಕ್ತವಾದ ಬಳಿಕ ಹಲ್ಲೆ ನಡೆಸಿದ ಸಂಸ್ಥೆಯ ಮುಖ್ಯಸ್ಥನನ್ನು ವಜಾ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇಷ್ಟೆಲ್ಲಾ ಅವಾಂತರಗಳು ನಡೆದರೂ ಪೊಲೀಸ್ ಠಾಣೆ ಮೆಟ್ಟಲು ಏರದಂತೆ ಪ್ರತಿಷ್ಠಿತ ವ್ಯಕ್ತಿಗಳು ಕೈಜೋಡಿಸಿದ್ದಾರೆಂಬ ಆರೋಪ ಕೇಳಿಬಂದಿದೆ.

ಈ ಕುರಿತು ಪೊಲೀಸ್ ಇಲಾಖೆ ಸ್ವಯಂ ಪ್ರೇರಿತವಾಗಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಬೇಕಾಗಿ ಒತ್ತಾಯ ಕೇಳಿಬರುತ್ತದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top