ಬಾವಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ರಕ್ಷಣೆ

Picture of RB NEWS

RB NEWS

Bureau Report

ಬಾವಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ರಕ್ಷಣೆ


ಕಾರ್ಕಳ, ಮೇ 10 : ಕುಕ್ಕುಂದೂರಿನ ಅಶ್ಪಥ್ ಪುರದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾವಿಯ ಕೆಸರು ಹಾಗೂ ಮಣ್ಣನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದ ಮೂವರು ಕಾರ್ಮಿಕರು ಬಾವಿಯೊಳಗೆ ಸಿಲುಕಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.
ಮೇ 10ರಂದು ಬೆಳಿಗ್ಗೆ ಸುಮಾರು 10.30ರ ವೇಳೆಗೆ ಮಾಹಿತಿ ಪಡೆದ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಾವಿಯೊಳಗೆ ಸಿಲುಕಿಕೊಂಡಿದ್ದ ರಾಜೇಶ್ (42), ಪವನ್ (29) ಹಾಗೂ ಗೋಪಾಲ ನಾಯ್ಕ್ (52) ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿ ರಕ್ಷಿಸಲಾಯಿತು.
ಜೀವಾಪಾಯದಿಂದ ಪಾರಾದ ಮೂವರು ಕಾರ್ಮಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿಶಾಮಕ ದಳದ ಠಾಣಾಧಿಕಾರಿ ಅಲ್ಬರ್ಟ್ ಮೋನಿಸ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸಿಬ್ಬಂದಿಗಳಾದ ರೂಪೇಶ್, ಸುರೇಶ್, ದಿನೇಶ್, ಗಣೇಶ್, ನಿತ್ಯಾನಂದ ಹಾಗೂ ಚಾಲಕ ಮುಜಾಮಿಲ್ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top