ಮಾತೃಪಕ್ಷಕ್ಕೆ ಮರಳಿದ ತೇಜಸ್ವಿನಿ ಗೌಡ

Picture of RB NEWS

RB NEWS

Bureau Report

ನವದೆಹಲಿ : ಮಾಜಿ ಸಂಸದೆ ಹಾಗೂ ವಿಧಾನಪರಿಷತ್ ಸದಸ್ಯೆಯಾಗಿದ್ದ ತೇಜಸ್ವಿನಿ ಗೌಡ ಅವರು ಬಿಜೆಪಿ ತೊರೆದು ಮರಳು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.

ಬಿಜೆಪಿಯಿಂದ ವಿಧಾನ​ ಪರಿಷತ್ ​ಸದಸ್ಯೆಯಾಗಿದ್ದ ತೇಜಸ್ವಿನಿ ಗೌಡ ಇತ್ತಿಚೇಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ವಿಧಾನ್​ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿ, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಉಲ್ಲೇಖಿಸಿದ್ದರು. ತೇಜಸ್ವಿನಿ ಗೌಡ ಅವರ ಪರಿಷತ್​ ಸದಸ್ಯ ಸ್ಥಾನದ ಅವಧಿ ಜೂನ್ 24ರ ವರೆಗೆ ಇತ್ತು.

ತೇಜಸ್ವಿನಿ ಗೌಡ ಬಿಜೆಪಿಯಿಂದ ಮೈಸೂರು ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಇದರಿಂದ ಅವರು ಅಸಮಾಧಾನಗೊಂಡಿದ್ದರು. ಇದೀಗ ದೆಹಲಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top