ಮೂವರು ಮಾಜಿ ಮುಖ್ಯಮಂತ್ರಿಗಳು ಜಯಭೇರಿ

Picture of RB NEWS

RB NEWS

Bureau Report

ಬೆಂಗಳೂರು : ಲೋಕಸಭೆ ಚುನಾವಣೆ 2024ರ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದೆ, ಈ ನಡುವೆ ಹಲವು ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಮಾಜಿ ಸಿಎಂ ಹಾಗೂ ಹಾವೇರಿಯ ಬಿಜೆಪಿ ಅಭ್ಯರ್ಥಿಯಾಗಿರುವ ಬಸವರಾಜ ಬೊಮ್ಮಾಯಿ ಅವರು ಗೆದ್ದು ಬೀಗಿದ್ದಾರೆ. ಇನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಕೆ. ಸುಧಾಕರ್ ಜಯ ಗಳಿಸಿದ್ದಾರೆ. ಮಂಡ್ಯ ಅಭ್ಯರ್ಥಿ ಎಚ್. ಡಿ ಕುಮಾರಸ್ವಾಮಿ ಸುಮಾರು 2 ಲಕ್ಷ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಗೆಲುವಿನತ್ತ ಹೆಜ್ಜೆ ಹಾಕಿದ್ದು ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.

ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಲ್ಕರ್ ಸೋಲನ್ನು ಅನುಭವಿಸಿದ್ದಾರೆ. ಬಳ್ಳಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ತುಕರಾಮ್ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಗೆ ಸೋಲಿನ ರುಚಿಯುಣಿಸಿದ್ದಾರೆ. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರು ಹೀನಾಯ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್ ನ ಶ್ರೇಯಸ್ ಪಟೇಲ್ ಅವರ ಗೆಲುವಿನ ಬಗ್ಗೆ ಅಧಿಕೃತ ಅಧಿಕೃತ ಘೋಷಣೆಯೊಂದು ಬಾಕಿ ಇದೆ. ಕಾರವಾರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗ್ಗಡೆ ಜಯಗಳಿಸಿದ್ದು , ಕೈ ನಾಯಕಿ ಅಂಜಲಿ ನಿಂಬಲ್ಕರ್ ಸೋತಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top