ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಯೋಜನೆ ಅನುಷ್ಠಾನವಾಗುವಂತೆ ಸರ್ಕಾರ ನೋಡಿಕೊಳ್ಳಬೇಕು -ವಿ ಸುನಿಲ್‌ ಕುಮಾರ್‌ ಪ್ರಸ್ತಾಪ

Picture of RB NEWS

RB NEWS

Bureau Report

ಈ ಯೋಜನೆಗೆ ಯಾರ ವಿರೋಧವೂ ಇಲ್ಲ. ಆದರೆ, ರೈತರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಯೋಜನೆ ಅನುಷ್ಠಾನದ ಕುರಿತಾಗಿ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ರೈತರು ಆಂತಕದಲ್ಲಿದ್ದಾರೆ. ಕೃಷಿ ಭೂಮಿ ಹಾಗೂ ಸಮೃದ್ಧವಾಗಿ ಬೆಳೆದು ನಿಂತ ಕೃಷಿಗೆ ಹಾನಿಯಾಗದಂತೆ ಸರಕಾರಿ ಭೂಮಿಯಲ್ಲಿ ವಿದ್ಯುತ್‌ ಲೈನ್‌ ಮತ್ತು ಟವರ್‌ ಅಳವಡಿಸಬೇಕು ಎಂಬುದು ರೈತರ ಆಗ್ರಹ. ಆದ್ದರಿಂದ ರೈತರ ಬೇಡಿಕೆಯಂತೆ ಕೃಷಿ ಭೂಮಿಗೆ ಹಾನಿಯಾಗದಂತೆ ಪರ್ಯಾಯ ಮಾರ್ಗವಾಗಿ ವಿದ್ಯತ್‌ ಲೈನ್‌ ಅಳವಡಿಕೆಯ ಬಗ್ಗೆ ಅಧಿಕಾರಿಗಳು ರೈತರೊಂದಿಗೆ ಮಾತುಕೆತೆ ನಡೆಸಿ ಯೋಜನೆಯಲ್ಲಿ ಬದಲಾವಣೆ ಮಾಡಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳುವ ಬಗ್ಗೆ ಸರಕಾರ ಕಾರ್ಯಪ್ರವೃತ್ತವಾಗಬೇಕು ಎಂದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಇಂಧನ ಸಚಿವರು, ಈ ವಿಚಾರವಾಗಿ ಕೇಂದ್ರ ಸರಕಾರ, ರಾಜ್ಯ ಸರಕಾರ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top