- ಲೋಕಸಭೆ ಚುನಾವಣೆ : ಕರಾವಳಿಯ ಘನ ಹುದ್ದೆಯಲ್ಲಿದವರು ತಮಿಳುನಾಡಿನಲ್ಲಿ ಅಭ್ಯರ್ಥಿಗಳು!
ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಾರ್ ರೂಂ ಮುಖ್ಯಸ್ಥ ಸಸಿಕಾಂತ್ ಸೆಂಥಿಲ್ ಅವರು ತಿರುವಳ್ಳೂರಗ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ವರ್ಥಿಸುತ್ತಿದ್ದಾರೆ.
ಸಸಿಕಾಂತ್ ಸೆಂಥಿಲ್ ಅವರು ಐಎಎಸ್ ಹುದ್ದೆ ಹೊಂದಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಇದೇ ಅವಧಿಯಲ್ಲಿ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು.
ಐಪಿಎಸ್ ಪದವಿ ಹೊಂದಿದ್ದ ಅಣ್ಣಾಮಲೈ ಕಾರ್ಕಳದಲ್ಲಿ ಎಎಸ್ಪಿ ಯಾಗಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ತದನಂತರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು.
ಐಪಿಎಸ್ ಹುದ್ದೆಗೆ ಸ್ವಯಂ ನಿವೃತ್ತಿ ಹೊಂದಿ ಬಿಜೆಪಿಗೆ ಸೇರ್ಪಡೆಗೊಂಡ ಅಣ್ಣಾಮಲೈ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದಾರೆ.
ತಮಿಳುನಾಡಿನ ಕೊಯಮತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ವರ್ಧಾಕಣಕ್ಕೆ ಇಳಿದಿದ್ದಾರೆ.






































