ಸಮಾಜದಲ್ಲಿ ಇದ್ದಂತಹ ಲಿಂಗ ತಾರತಮ್ಯದಲ್ಲಿ ಸುಧಾರಣೆ ಕಂಡಿದೆ

Picture of RB NEWS

RB NEWS

Bureau Report

ಕಾರ್ಕಳ : ಸಮಾಜದಲ್ಲಿ ಇದ್ದಂತಹ ಲಿಂಗ ತಾರತಮ್ಯದಲ್ಲಿ ಸುಧಾರಣೆ ಕಂಡಿದೆ. ಪ್ರಸಕ್ತ ಕಾಲಘಟ್ಟದಲ್ಲಿ ಹೆಣ್ಷು ಮಕ್ಕಳಿಗೆ ವಿಶೇಷ ಸ್ಥಾನಮಾನಗಳು ದೊರೆತ್ತಿದ್ದು, ಸಿಕ್ಕ ಅವಕಾಶವನ್ನು ಸದುಪಯೋಗಿಸಿಗೊಂಡು ಸಮಾಜದಲ್ಲಿ ಮುಂದೆ ಬರಬೇಕು ಎಂದು ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಕೋಮಲ ಆರ್.ಸಿ. ಅಭಿಮತ ವ್ಯಕ್ತಪಡಿಸಿದರು.

ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ (ರಿ.) ಕಾರ್ಕಳ ಮತ್ತು ಕಾರ್ಕಳ ಮಂಜುನಾಥ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮಾನವಿಕ ಸಂಘ ಮತ್ತು ಮಹಿಳಾ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಜುನಾಥ ಪೈ ಮೆಮೋರಿಯಲ್ ಸರ್ಕಾರಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಕೆ. ಹರೀಶ್ ಅಧಿಕಾರಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಹೆಣ್ಣು ಮಕ್ಕಳ ಸುರಕ್ಷಣೆ ಹಾಗೂ ಹಕ್ಕಿಗಾಗಿ ಸಂವಿಧಾನದ ಕೆಲ ಕಾನೂನಗಳನ್ನು ತಿದ್ದುಪಡಿ ತರಲಾಗಿದೆ. ಈ ನಡುವೆ ಕೆಲವು ಘಟನೆಗಳ ಅಲ್ಲಲ್ಲಿ ನಡೆಯುತ್ತಿರುವುದು ಕಾಣಬಹುದಾಗಿದೆ. ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿರುವುದು ಅಗತ್ಯ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ನ್ಯಾಯವಾದಿ ನಂದಿನಿ ಬಿ. ಶೆಟ್ಟಿ ‌ಮಾತನಾಡಿ, ವಿಶ್ವದಾದ್ಯಂತ ಮಹಿಳೆಯರ ಸಬಲೀಕರಣ ಮತ್ತು ಸರ್ವತೋಮುಖ ಅಭಿವೃದ್ಧಿಗಾಗಿ ಅಂತರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಂಡು ಹೆಣ್ಣು ಮಕ್ಕಳು ಎಲ್ಲಾ ರಂಗಗಳಲ್ಲಿಯೂ ಮುಂದೆ ಬರಬೇಕೆಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಡಾ. ಚಂದ್ರಾವತಿ ಮಾತನಾಡಿ, ಹೆಣ್ಣು ಸಮಾಜದ ಕಣ್ಣು. ದೇಶದ ಪ್ರಮುಖ ಹುದ್ದೆಗಳಲ್ಲೂ ಹೆಣ್ಣು ಚುಕ್ಕಾಣಿ ಹಿಡಿದಿರುವುದು ಕಾಣಬಹುದು. ಸಮಯ ಪ್ರಜ್ಞೆ, ಕರ್ತವ್ಯ ನಿಷ್ಠೆ ತೋರಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿಯಾಗಿದೆ ಎಂದರು.

ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕಿ ಭಾಗ್ಯಲಕ್ಷ್ಮೀ ಆತಿಥಿಗಳನ್ನು ಸ್ವಾಗತಿಸಿದರು.‌

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top