ಸಾಧಿಸಿದ ಛಲ ಯುವಜನತೆಗೆ ಮಾದರಿ

Picture of RB NEWS

RB NEWS

Bureau Report


ಕಾರ್ಕಳ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದ ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಸಭೆಯನ್ನು ಉದ್ದೇಶಿಸಿ ಮಾತನಾಡಿ, ಅಂಬೇಡ್ಕರ್ ಅವರು ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದು ಸಾಧಿಸಿದ ಛಲ ಇಂದಿನ ಯುವಜನತೆಗೆ ಮಾದರಿಯಾಗಿದೆ ಎಂದರು. ಅಸ್ಪೃಶ್ಯತೆ ಎಂಬ ಸಾಮಾಜಿಕ ಪಿಡುಗಿನ ವಿರುದ್ಧ ಅವರು ನಡೆಸಿದ ಹೋರಾಟ ಅಮೋಘವಾಗಿದ್ದು, ಅವರ ವ್ಯಕ್ತಿತ್ವವನ್ನು ಕೇವಲ ಸಂವಿಧಾನ ರಚನೆಗೆ ಮಾತ್ರ ಸೀಮಿತಗೊಳಿಸದೇ ಸಮಗ್ರವಾಗಿ ಅರಿಯಬೇಕಾಗಿದೆ ಎಂದು ಹೇಳಿದರು.

  • ಅದೇ ವೇಳೆ, ಅಂಬೇಡ್ಕರ್ ಅವರ ರಾಜಕೀಯ ಜೀವನದಲ್ಲಿ ಎದುರಾದ ಅಡೆತಡೆಗಳನ್ನು ಉಲ್ಲೇಖಿಸಿದ ಅವರು, ಅವರ ವಿರುದ್ಧ ರಾಜಕೀಯವಾಗಿ ನಡೆದ ಘಟನೆಗಳನ್ನು ಇತಿಹಾಸದಲ್ಲಿ ಮರೆಯಲಾಗದು ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಪಕ್ಷದ ವಕ್ತಾರ ನ್ಯಾಯವಾದಿ ರವೀಂದ್ರ ಮೊಯ್ಲಿ, ಮಂಡಲ ಉಪಾಧ್ಯಕ್ಷ ಅನಂತ ಕೃಷ್ಣ ಶೆಣೈ, ನಗರ ಅಧ್ಯಕ್ಷ ನಿರಂಜನ್ ಜೈನ್, ಪುರಸಭಾ ಮಾಜಿ ಅಧ್ಯಕ್ಷೆ ಸುಮಾ ಕೇಶವ್, ಪುರಸಭಾ ನಿಕಟಪೂರ್ವ ಸದಸ್ಯ, ಎಸ್‌ಸಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್ ಕಾರ್ಲ, ಎಸ್‌ಟಿ ಮೋರ್ಚಾ ಅಧ್ಯಕ್ಷ ಸಂಜೀವ ಮಾಳ ಸೇರಿದಂತೆ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top