ಸಾಮಾಜಿಕ ನ್ಯಾಯದ ಸಂದೇಶ ಮತ್ತು ಸಮಾನತೆಯ ಮೌಲ್ಯಗಳು

Picture of RB NEWS

RB NEWS

Bureau Report

ಸಾಮಾಜಿಕ ನ್ಯಾಯದ ಸಂದೇಶ ಮತ್ತು ಸಮಾನತೆಯ ಮೌಲ್ಯಗಳು

ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಘಟಕದ ವತಿಯಿಂದ ರವಿವಾರ ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಡಾ. ಬಿಆರ್ ಅಂಬೇಡ್ಕರ್ 135ನೇ ಜಯಂತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಲಿತ ಹಕ್ಕುಗಳ ಸಮಿತಿಯ ಅಧ್ಯಕ್ಷರಾದ ಸಂಜೀವ ಬಳ್ಕೂರು ಅವರು ವಹಿಸಿದ್ದರು.

ಕುಂದಾಪುರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ರಮೇಶ್ ರವರು ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಪ್ರಧಾನ ಉಪನ್ಯಾಸಕರಾಗಿ ಆಗಮಿಸಿದ ಶ್ರೀರಾಮ ದಿವಾಣ ಮೂಡುಬೆಳ್ಳೆ, ಸಿಐಟಿಯು ರಾಜ್ಯ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ರಾಜೀವ ಪಡುಕೋಣೆ, ಎಚ್. ನರಸಿಂಹ, ದಲಿತ ಹಕ್ಕುಗಳ ಸಮಿತಿಯ ಉಪಾಧ್ಯಕ್ಷರಾದ ನಾಗರತ್ನ ನಾಡ, ಜನವಾದಿ ಮಹಿಳಾ ಸಂಘಟನೆಯ ಶೀಲಾವತಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ವಿ.ಎಂ. ಅವರು ಸ್ವಾಗತಿಸಿದರು. ಕೋಶಾಧಿಕಾರಿ ನಾಗರತ್ನ ಆರ್. ನಾಡ ಅವರು ಕಾರ್ಯಕ್ರಮವನ್ನು ನಿರೂಪಿಸಿ,ವಂದಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top