ಸಿದ್ಧಕಟ್ಟೆಯಿಂದ ಗಡಿ ರಕ್ಷಣಾ ಪಡೆಗೆ ಆಯ್ಕೆಗೊಂಡ ಹಳೆ ವಿದ್ಯಾರ್ಥಿನಿಗೆ ಸನ್ಮಾನ

Picture of RB NEWS

RB NEWS

Bureau Report

ವರದಿ : ರಾಯಿ ರಾಜಕುಮಾರ ಮೂಡುಬಿದಿರೆ

ಮೂಡುಬಿದಿರೆ: ಬಂಟ್ವಾಳ ತಾಲೂಕು ಸಿದ್ದಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿನಿ ಕು. ಭಾರತಿ ಶೆಟ್ಟಿ ಅವರು ಗಡಿ ರಕ್ಷಣಾ ಪಡೆಗೆ ಆಯ್ಕೆಗೊಂಡ ಹಿನ್ನೆಲೆಯಲ್ಲಿ ದಶಂಬರ 16 ರಂದು ಸನ್ಮಾನಿಸಲಾಯಿತು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಉದಯ್ ಕುಮಾರ್ ಅವರು ವಿದ್ಯಾರ್ಥಿನಿಯನ್ನು ಸನ್ಮಾನಿಸಿ ಶುಭ ಹಾರೈಸಿ ಈಕೆಯ ಸಾಧನೆ ಉಳಿದವರಿಗೆ ಸ್ಪೂರ್ತಿಯಾಗಲಿ ಎಂದರು.

ಸನ್ಮಾನಕ್ಕೆ ಉತ್ತರಿಸಿದ ಭಾರತಿ, ಹೆಣ್ಣು ಮಕ್ಕಳು ಸ್ವಾವಲಂಬನೆಯ ಬದುಕನ್ನು ನಡೆಸುವುದಕ್ಕಾಗಿ ಪ್ರಯತ್ನಿಸಬೇಕು. ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಿ ಅದನ್ನು ತಲುಪಲು ಸದಾ ಪ್ರಯತ್ನಿಸಿದರೆ ಮಾತ್ರ ಗುರಿಯನ್ನು ಸಾಧಿಸಲು ಸಾಧ್ಯವಿದೆ ಎಂದು ತಮ್ಮದೇ ಉದಾಹರಣೆಯನ್ನು ಕೊಟ್ಟರು.

ಕಾಲೇಜಿನ ಉಪನ್ಯಾಸಕ ಸಂಜಯ್ ಬಿ ಎಸ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಶೀನಪ್ಪ ವಂದಿಸಿದರು

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top