ಹೆಲ್ಮೆಟ್ ನಿಂದ ಬಸ್ಸಿನ ಗಾಜು ಪುಡಿಗೈದ ಯುವಕ

Picture of RB NEWS

RB NEWS

Bureau Report

ಮಂಗಳೂರು: ಕಂಕನಾಡಿ ಠಾಣಾ ವ್ಯಾಪ್ತಿಯ ಅಳಪೆ ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸನ್ನು ತಡೆಗಟ್ಟಿದ್ದ ಸ್ಕೂಟರ್ ಸವಾರ ಹೆಲ್ಮೆಟ್ ನಿಂದ ಬಸ್ಸಿನ ಮುಂಭಾಗದ ಗಾಜನ್ನು ಒಡೆದು ಪರಾರಿಯಾದ ಘಟನೆ ನಡೆದಿದೆ.

ಕೆ ಎಸ್ ಆರ್ ಟಿ ಸಿ ಬಸ್ಸನ್ನು ಚಾಲಕ ಅರುಣ್ ಎಂಬುವವರು ಚಲಾಯಿಸುತ್ತಿದ್ದರು. ಬಸ್ಸಿಗೆ ಅಡ್ಡ ಬಂದ ಸ್ಕೂಟರ್ ಸವಾರನನ್ನು ಪ್ರಶ್ನಿಸಿದ್ದಕ್ಕೆ ಕುಪಿತಗೊಂಡ ಸ್ಕೂಟರ್ ಸವಾರ ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಕಂಕನಾಡಿ ಪೊಲೀಸರು ಬಸ್ಸು ಚಾಲಕನನ್ನು ವಿಚಾರಿಸಿ, ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ.

ಬಸ್ಸು ಚಾಲಕ ಅರುಣ್ ರವರ ದೂರಿನಂತೆ ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕ ಆಸ್ತಿ ಹಾನಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಆರೋಪಿತನ ಬಗ್ಗೆ ಮಾಹಿತಿ ತಿಳಿದು ಬಂದಿದ್ದು ಪತ್ತೆ ಕಾರ್ಯ ನಡೆಸಲಾಗುತ್ತಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top