ಅಂಬಲಪಾಡಿ: ರಸ್ತೆ ಅಪಘಾತದಲ್ಲಿ ಓರ್ವ ಮೃತ್ಯು

Picture of RB NEWS

RB NEWS

Bureau Report


ಉಡುಪಿ: ಕಟಪಾಡಿ ಕಡೆಯಿಂದ ಕುಂದಾಪುರದತ್ತ ತೆರಳುತ್ತಿದ್ದ ವಾಹನ ಕ್ರೇನ್‌ಗೆ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ, ತೀವ್ರವಾಗಿ ಗಾಯಗೊಂಡಿದ್ದ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ರಾಷ್ಟಿçÃಯ ಹೆದ್ದಾರಿಯ ಅಂಬಲಪಾಡಿಯ ಪೆಟ್ರೋಲ್ ಬಂಕ್ ಬಳಿ ಸೆಪ್ಟೆಂಬರ್ ೭ರಂದು ಸಂಭವಿಸಿದೆ. ಕುಂದಾಪುರ ತಾಲೂಕಿನ ಕಂಡ್ಲೂರು ನಿವಾಸಿ ನಿಸಾರ್ ಅಹ್ಮದ್ (೩೯) ಅಪಘಾತದಲ್ಲಿ ಕೊನೆಯುಸಿರೆಳೆದ ದುರ್ದೆÊವಿ.
ನಿಸಾರ್ ಅಹ್ಮದ್ ಅವರು ತಮ್ಮ ಪರಿಚಯಸ್ಥರ ಜೊತೆ ವಾಹನದಲ್ಲಿ ಕಟಪಾಡಿ ಕಡೆಯಿಂದ ಕುಂದಾಪುರಕ್ಕೆ ಸಾಗುತ್ತಿದ್ದರು. ಕಾರು ಅಂಬಲಪಾಡಿ ಜಂಕ್ಷನ್ ಬಳಿಯ ಪೆಟ್ರೋಲ್ ಬಂಕ್ ಸಮೀಪ ತಲುಪಿದಾಗ, ಸರ್ವಿಸ್ ರಸ್ತೆಯಿಂದ ಮುಖ್ಯ ರಸ್ತೆಗೆ ಬಂದು ಸಂತೆಕಟ್ಟೆ ಕಡೆಗೆ ಸಾಗುತ್ತಿದ್ದ ಕ್ರೇನ್‌ಗೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ಹಿಂಭಾಗದಿAದ ಭೀಕರವಾಗಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊAಡಿದ್ದು , ನಿಸಾರ್ ಅಹ್ಮದ್ ಹಾಗೂ ನಾಗರಾಜ್ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಇಬ್ಬರನ್ನೂ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಈ ಪೈಕಿ ನಾಗರಾಜ್ ಅವರು ಚಿಕಿತ್ಸೆಗೆ ಸ್ಪಂದಿಸಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತೀವ್ರ ಗಾಯಗೊಂಡಿದ್ದ ನಿಸಾರ್ ಅಹ್ಮದ್ ಅವರ ಪರಿಸ್ಥಿತಿ ಚಿಂತಾಜನಕವಾಗಿದ್ದರಿAದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಸಾರ್ ಅಹ್ಮದ್ ಕೊನೆಯುಸಿರೆಳೆದಿದ್ದಾರೆ. ಘಟನೆ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top