ಕಾಸರಗೋಡು: ಅಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಉಂಟಾದ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ನಡೆದಿದೆ. ಮಂಗಳವಾರ ಬೆಳಿಗ್ಗೆ ಸಂಭವಿಸಿದ ಈ ಘಟನೆಯಲ್ಲಿ ಕಾರಿನಲ್ಲಿದ್ದ ತೃಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಕಾಸರಗೋಡು: ಅಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಉಂಟಾದ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ನಡೆದಿದೆ.
ಮಂಗಳವಾರ ಬೆಳಿಗ್ಗೆ ಸಂಭವಿಸಿದ ಈ ಘಟನೆಯಲ್ಲಿ ಕಾರಿನಲ್ಲಿದ್ದ ತೃಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಅಪಘಾತದಿಂದ ನಜ್ಜುಗುಜ್ಜಾದ ಕಾರಿನಿಂದ ಹರಸಾಹಸಪಟ್ಟು ಹೊರತೆಗೆಯಲಾಯಿತು. ಈ ವೇಳೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಕಾಸರಗೋಡಿಗೆ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ.
ಸೋಮವಾರ ಚಟ್ಟಂಚಾಲ್ ನಲ್ಲಿ ಸಂಭವಿಸಿದ ವಾಹನ ಅಪಘಾತವೊಂದರಲ್ಲಿ ಗಾಯಗೊಂಡಿದ್ದ ಉಷಾರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾಸರಗೋಡು ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.
ಕಾರಿನಲ್ಲಿದ್ದವರು ಕೊಲ್ಲೂರು ಕ್ಷೇತ್ರ ದರ್ಶನ ಮುಗಿಸಿ ಮರಳಿ ತ್ರಿಶೂರಿಗೆ ತೆರಳುತ್ತಿದ್ದರು.
ಅಪಘಾತದ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿತು. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆ್ಯಂಬುಲೆನ್ಸ್ ರಸ್ತೆಯಲ್ಲಿ ಮಗುಚಿ ಬಿದ್ದಿದೆ.