ಅಂಬುಲೆನ್ಸ್ ಸಂಚಾರಕ್ಕೆ ಅಡಚಣೆ : ದ್ವಿಚಕ್ರ ವಾಹನ ಸವಾರ ವಿರುದ್ದ ಪ್ರಕರಣ ದಾಖಲು
RB NEWS
Bureau Report
ಅಂಬುಲೆನ್ಸ್ ಸಂಚಾರಕ್ಕೆ ಅಡಚಣೆ : ದ್ವಿಚಕ್ರ ವಾಹನ ಸವಾರ ವಿರುದ್ದ ಪ್ರಕರಣ ದಾಖಲು
ಪುತ್ತೂರು : ಅ. 30 ರಂದು ಬಿಸಿಲೆ ಘಾಟ್ ಘಾಟ್ ನಲ್ಲಿ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತರಲಾಗಿತ್ತು.
ಆ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸಲಹೆ ನೀಡಿದ್ದರು.
ಅದರಂತೆ KA.22.C.1382 ನೇ ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ ನಿಂದ ಅಂಬ್ಯುಲೆನ್ಸ್ ಮುಂದಿನಿಂದ KA.19.EK.0696 ನೇ ದ್ವಿಚಕ್ರ ವಾಹನ ಸವಾರ ಅಂಬ್ಯುಲೆನ್ಸ್ ನ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿರುವ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ KA.19.EK.0696 ನೇ ದ್ವಿಚಕ್ರ ವಾಹನ ಸವಾರ ಮಹಮ್ಮದ್ ಮನ್ಸೂರು (38) ಬೆಟ್ಟಂಪಾಡಿ ಗ್ರಾಮ ಪುತ್ತೂರು ತಾಲೂಕು ಎಂಬುವರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 128/2025 ಕಲಂ:110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.