ಅಕ್ರಮ ಕಸಾಯಿಖಾನೆಗೆ ದಾಳಿ
3ದನಗಳ ರಕ್ಷಣೆ : 50 ಕೆ ಜಿ ಮಾಂಸ ಪತ್ತೆ : 2 ಕಾರು ವಶಕ್ಕೆ
ಮೂಡುಬಿದಿರೆ: ಗಂಟಾಲ್ ಕಟ್ಟೆಯ ಜಲೀಲ್ ಎಂಬುವರ ಮನೆಯ ಹಿಂಭಾಗದ ಗುಡ್ಡೆಯ ಹಾಡಿಯಲ್ಲಿ ಅಕ್ರಮವಾಗಿ ತಲೆಎತ್ತಿದ್ದ ಕಾಸಾಯಿಖಾನೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ.ಜಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

ಕಾರ್ಯಚರಣೆ ಸಂದರ್ಭದಲ್ಲಿ ಆರೋಪಿತರು ಹಸುವನ್ನು ಕಡಿದು ಮಾಂಸ ಮಾಡುತ್ತಿದ್ದರೆಂಬ ಮಾಹಿತಿ ತಿಳಿದುಬಂದಿದೆ. ಸ್ಥಳದಲ್ಲಿದ್ದ ಸುಮಾರು 50 ಕೆ.ಜಿ ದನದ ಮಾಂಸ ಮತ್ತು ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ. ಕಡಿಯಲು ಕದ್ದು ತಂದಿದ್ದ 3 ದನಗಳನ್ನು ರಕ್ಷಿಸಿ ಗೋಶಾಲೆಗೆ ಒಪ್ಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಜಲೀಲ್ ಕಲ್ಲಬೆಟ್ಟು, ಸಾಹಿಲ್ ಮತ್ತು ಆತನ ಮಗ ಸೊಹೇಲ್ ಮತ್ತು ಕುದ್ರೋಳಿ ನಿವಾಸಿ ಮೊಹಮ್ಮದ್ ಅಶ್ರಫ್ ಪರಾರಿಯಾಗಿರುತ್ತಾರೆ.






































