ಅಜೆಕಾರಿನಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ.
RB NEWS
Bureau Report
ಅಜೆಕಾರಿನಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ
.
ಅಜೆಕಾರು: ಅಜೆಕಾರು ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಿರ್ಮಾಣಗೊಂಡ ಶಿಲಾಮಯ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ ಭಕ್ತಿಭಾವದಿಂದ ನಡೆಯಿತು. ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ, “ತಾನು ಬದುಕುವ ಜೊತೆಗೆ ಇತರರನ್ನು ಬದುಕಲು ಬಿಡುವುದೇ ಜೀವನದ ಸಾರ್ಥಕತೆ” ಎಂದು ಹೇಳಿದರು. ಧರ್ಮ, ಸಹಿಷ್ಣುತೆ ಹಾಗೂ ಪರಸ್ಪರ ಸಹಬಾಳ್ವೆಯ ಮಹತ್ವವನ್ನು ಅವರು ಒತ್ತಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನೀಲ್ ಕುಮಾರ್ ವಹಿಸಿ ಮಾತನಾಡಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಸಾಧನೆ ಮಾಡುತ್ತಿದ್ದು, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಪ್ರಶಂಸಿಸಿದರು. ಫಲಪುಷ್ಪ ಸಮರ್ಪಣೆಯನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಶಿವರಾಮ್ ಶೆಟ್ಟಿ, ಬಳ್ಳಾರಿ ಮರ್ಚಂಟ್ ಟ್ರಸ್ಟ್ ಅಧ್ಯಕ್ಷ ಎಂ. ಜಿ. ಗೌಡ್, ಉದ್ಯಮಿಗಳಾದ ಮಹೇಶ್ ಶೆಟ್ಟಿ ಕುಡುಪುಲಾಜೆ, ಶಶಿಧರ್ ಶೆಟ್ಟಿ, ಜಗದೀಶ್ ಕಾರಂತ, ಕಮಲಾಕ್ಷ ನಾಯಕ್ ಹಾಗೂ ಡಾ. ಸಂತೋಷ್ ಕುಮಾರ್ ಶೆಟ್ಟಿ ಅಜೆಕಾರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಡಾ. ಸುಧಾಕರ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದಾಮೋದರ ಶರ್ಮ ಕಾರ್ಯಕ್ರಮವನ್ನು ನಿರೂಪಿಸಿದರು.