[t4b-ticker]

ಅಡ್ಡ ಮತ ಚಲಾಯಿಸಿದಬಿಜೆಪಿ ಶಾಸಕ

Picture of RB NEWS

RB NEWS

Bureau Report

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ  ಎಸ್​​ಟಿ ಸೋಮಶೇಖರ್ ಕಾಂಗ್ರೆಸ್ ಪರ ಮತ ಚಲಾಯಿಸಿ ಅಡ್ಡ ಮತದಾನದ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ.


ವಿಧಾನಸೌಧದಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಆತ್ಮಸಾಕ್ಷಿಯ ಮತ ಚಲಾವಣೆ ಮಾಡಿದ್ದೇನೆ ಎಂದು ಅಡ್ಡ ಮತದಾನದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.


ಇನ್ನು ಶಾಸಕ ಎಸ್​​ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ ಹಿನ್ನೆಲೆ ವಿಪಕ್ಷ ನಾಯಕ ಆರ್ ಅಶೋಕ್ ಅವರ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಅವರು, ‘ಈ ಬಗ್ಗೆ ತಲೆ ಕೆಡೆಸಿಕೊಳ್ಳುವುದು ಬೇಡ. ಅದು ಗೊತ್ತಿದ್ದ ವಿಷಯ’ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top