ಅತಂತ್ರ ಸ್ಥಿತಿಯಲ್ಲಿ ಸಾಣೂರಿನಲ್ಲಿ ಗುಡ್ಡಜರಿದು 220 ಕೆವಿ ಹೈ_ಟೆನ್ಶನ್ ವಿದ್ಯುತ್ ಗೋಪುರ

Picture of RB NEWS

RB NEWS

Bureau Report

ಕಾರ್ಕಳ : ಕಳೆದೊಂದು ವರ್ಷದಿಂದ ಸಾಣೂರು ಯುವಕ ಮಂಡಲದ ಮೈದಾನದ ಬಳಿ ಹೆದ್ದಾರಿ ಕಾಮಗಾರಿ ವೇಳೆ ಕಡಿದಿರುವ ಗುಡ್ಡ ಜರಿಯುತ್ತಿರುವ ಭಾಗಕ್ಕೆ ತಡೆಗೋಡೆ ನಿರ್ಮಾಣಕ್ಕೆ ನಿರಂತರವಾಗಿ ಆಗ್ರಹಿಸುತ್ತಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಲಕ್ಷ್ಯ ವಹಿಸುತ್ತಾ ಬಂದಿದೆ.

ಜೂನ್ 12 ಶುಕ್ರವಾರದಂದು ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಶಾಸಕರು ಮತ್ತು ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಈ ಅಪಾಯಕಾರಿ ಜಾಗಕ್ಕೆ ಭೇಟಿ ನೀಡಿ ಒಂದು ವಾರದ ಒಳಗೆ ಕಾಮಗಾರಿಯನ್ನು ಪ್ರಾರಂಭಿಸಿ ಮೂರು ತಿಂಗಳ ಒಳಗೆ ತಡೆಗೋಡೆ ನಿರ್ಮಾಣ ಕಾರ್ಯವನ್ನು ಮುಗಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿದರೂ ಯಾವುದೇ ಪ್ರಗತಿ ಕಂಡಿಲ್ಲ‌

ಕಳೆದ ಕೆಲ ದಿನಗಳಿಂದ ಭಾರಿ ಮಳೆ ಸುರಿದು ಗುಡ್ಡದ ಇನ್ನಷ್ಟು ಭಾಗದ ಮಣ್ಣು ಜರಿದು ರಸ್ತೆಗೆ ಬೀಳುತ್ತಿದ್ದರೂ ಯಾವುದೇ ರಕ್ಷಣಾತ್ಮಕ ಕೆಲಸ ಕಾರ್ಯಗಳನ್ನು ಇನ್ನೂ ಕೈಗೆತ್ತಿಕೊಳ್ಳದೇ ಇರುವ ಕುರಿತು ನಾಗರಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಗುಡ್ಡಜರಿದ ಭಾಗಕ್ಕೆ ಬಿಳಿ ಟಾರ್ಪಲ್ ನ್ನು ಕಳೆದ ಒಂದು ತಿಂಗಳ ಹಿಂದೆ ಹೊದಿಸಿ ಜನರ ಆಕ್ರೋಶವನ್ನು ಅಣಕವಾಡುತ್ತಿದೆ.

ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳ ನಿರ್ದೇಶನದ ಹೊರತಾಗಿಯೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ.

ಮುಂದೆ ಆಗುವ‌ ಯಾವುದೇ ರೀತಿಯ ಅನಾಹುತಗಳಿಗೆ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಯೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿ ಭೂ ಮಾಲಕರ ಹೋರಾಟ ಸಮಿತಿಯ ಪ್ರಮುಖ ಸಾಣೂರು ನರಸಿಂಹ ಕಾಮತ್ ಎಚ್ಚರಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top