ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ವಾರ್ಷಿಕ ಮಹೋತ್ಸವ ಸಂಪನ್ನ

Picture of RB NEWS

RB NEWS

Bureau Report

ಕಾರ್ಕಳ, ಅತ್ತೂರು: ಅತ್ತೂರಿನ ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವದ ಅಂತಿಮ ದಿನ ಭಕ್ತರ ಅಪಾರ ಸಂಖ್ಯೆಯನ್ನು ಆಕರ್ಷಿಸಿದ್ದು, ಸಾವಿರಾರು ಭಕ್ತರು ಹರಕೆಗಳನ್ನು ಈಡೇರಿಸಲು ಮತ್ತು ತಮ್ಮ ಬಿನ್ನಹಗಳನ್ನು ಅರ್ಪಿಸಲು ಪುಣ್ಯಕ್ಷೇತ್ರಕ್ಕೆ ಆಗಮಿಸಿದರು. ಈ ಮಹೋತ್ಸವವು ಭಕ್ತರಲ್ಲಿ ಆಧ್ಯಾತ್ಮಿಕ ಉತ್ಸಾಹವನ್ನು ಭಕ್ತಿಯಲ್ಲಿ ಮಿಂದೇಳುವಂತಾಗಿದ್ದು, ನಂಬಿಕೆ, ಭರವಸೆ, ಮತ್ತು ಸಮುದಾಯ ಸೌಹಾರ್ದತೆಯ ಪ್ರತೀಕವಾಗಿ ಪರಿಣಮಿಸಿತು.

ಬಸಿಲಿಕಾದ ವಠಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಹೂವಿನ ತೋರಣಗಳು, ವಿದ್ಯುತ್ ದೀಪಾಲಂಕಾರ, ಮತ್ತು ವೈಭವೀಕರಿಸಲಾದ ಶೃಂಗಾರದಿಂದ ಭಕ್ತರ ಮನಸ್ಸನ್ನು ಸೆಳೆಯುವಂತಾಗಿದ್ದವು. ಈ ವರ್ಷದ ಮಹೋತ್ಸವದ ಪ್ರಮುಖ ಸಂದೇಶ “ಭರವಸೆ ನಮ್ಮನ್ನು ನಿರಾಸೆ ಮಾಡುವುದಿಲ್ಲ” ಎಂಬುದಾಗಿದ್ದು, ಎಲ್ಲ ಧರ್ಮದ ಜನರ ಒಗ್ಗಟ್ಟನ್ನು ಉತ್ತೇಜಿಸುವ ಸಂದೇಶವನ್ನು ನೀಡಿತು.

ಮಹೋತ್ಸವದ ಶೃಂಗಾರ ದಿನವಾದ ಇಂದು ಎಂಟು ಬಲಿಪೂಜೆಗಳು ನೆರವೇರಿದವು. ಬಾರಾಯ್ ಪುರ್ ಧರ್ಮಕ್ಷೇತ್ರದ ನಿವೃತ್ತ ಧರ್ಮಾಧ್ಯಕ್ಷ ಪರಮಪೂಜ್ಯ ಅ/ವಂ/ಡಾ. ಸಲ್ವಾದೋರ್ ಲೋಬೊ ಅವರು ಪ್ರಮುಖ ಬಲಿಪೂಜೆಯನ್ನು ನೆರವೇರಿಸಿದರು. ಗುರು ಜಿತೇಶ್, ತಮ್ಮ ಧಾರ್ಮಿಕ ಬೋಧನೆಯಲ್ಲಿ, ಭರವಸೆಯ ಜೀವನ, ಕ್ರಿಸ್ತನೊಂದಿಗೆ ಯಾತ್ರಾರ್ಥಿಗಳಾಗುವ ಮಹತ್ವ, ಮತ್ತು ಜುಬಿಲಿ ವರ್ಷದ ಆಶಯಗಳನ್ನು ಪ್ರಬೋಧಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top