ಅತ್ಯಾಚಾರಿಗಳನ್ನು ರಕ್ಷಿಸುವ, ಸ್ಥಾನ ಮಾನ ನೀಡುವುದಕ್ಕೆ ಕಾಂಗ್ರೆಸ್ ಮುಂದಾಗುವುದಿಲ್ಲ-ಮುನಿಯಾಲು ಉದಯಕುಮಾರ್ ಶೆಟ್ಟಿ

Picture of RB NEWS

RB NEWS

Bureau Report


ಕಾರ್ಕಳ: ಕುಕ್ಕುಂದೂರು ಅಯ್ಯಪ್ಪನಗರದ ಯುವತಿಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಅಮಲು ಪದಾರ್ಥ ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕುರಿತು ರಾಜ್ಯ ಗೃಹ ಸಚಿವ ಪರಮೇಶ್ವರ ಅವರೊಂದಿಗೆ ಕಾರ್ಕಳ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ದೂರುಸಂಪರ್ಕ ಮೂಲಕ ಮನವಿ ಮಾಡಿಕೊಂಡಿದ್ದು, ಸಕರಾತ್ಮಕ ಸ್ಪಂದನೆ ದೊರೆತ್ತಿದೆ ಎಂದು ತಿಳಿದುಬಂದಿದೆ.

ಕಾರ್ಕಳದ ಅಮಾಯಕ ದಲಿತ ಯುವತಿಯನ್ನು ತಮ್ಮ ದಾಳಕ್ಕೆ ಬಳಸಿದ ಆರೋಪಿಗಳನ್ನು ಪೊಲೀಸರು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕು. ಆರೋಪಿಗಳ ಬಗ್ಗೆ ಎಲ್ಲಾ ಮಾಹಿತಿ ಪಡೆದಿರುವ ಪೊಲೀಸರು ಕೂಡಲೇ ಬಂಧಿಸುವಂತೆ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಆಗ್ರಹಿಸಿದ್ದಾರೆ.

ಅತ್ಯಾಚಾರಿಗಳನ್ನು ರಕ್ಷಿಸುವ ಹಾಗೂ ಅವರಿಗೆ ಸ್ಥಾನ ಮಾನ ನೀಡುವುದಕ್ಕೆ ಎಂದೆಂದಿಗೂ ಕಾಂಗ್ರೆಸ್ ಪಕ್ಷ ಮುಂದಾಗಿಲ್ಲ. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವ ಅಗತ್ಯತೆ ಇದೆ. ಆ ಮೂಲಕ ಶಾಂತಿ,ಸೌಹಾರ್ದತೆಗೆ ದಕ್ಕೆ ಉಂಟು ಮಾಡುವವರ ಮಟ್ಟ ಹಾಕುವುದಕ್ಕೆ ಪೊಲೀಸ್ ಇಲಾಖೆ ಮುಂದಾಗಬೇಕು ಎಂದಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top