ಅಪಾಯಕಾರಿ ಫ್ಲೈಓವರ್‌ !

Picture of RB NEWS

RB NEWS

Bureau Report

ಮೂಡುಬಿದಿರೆ : ಬೆಳುವಾಯಿ ಫ್ಲೈಓವರ್‌ನಲ್ಲಿ ರಸ್ತೆ ನಿರ್ಮಾಣದ ಕಾಮಗಾರಿಯ ದೋಷದಿಂದಾಗಿ ಮತ್ತೊಂದು ಅಪಘಾತ ಸಂಭವಿಸಿದೆ.
ಕಳೆದ ಎರಡು ವಾರಗಳ ಅವಧಿಯಲ್ಲಿ ಇದೇ ಸ್ಥಳದಲ್ಲಿ ಸಂಭವಿಸಿದ ಮೂರನೇ ಅಪಘಾತ ಇದಾಗಿದೆ. ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್‌ನಲ್ಲಿ ಮಳೆ ನೀರು ಹರಿದು ಹೋಗದೇ ಶೇಖರಣೆಯಾಗುತ್ತಿರುವುದು ಈ ರೀತಿ ಸರಣಿ ಅಪಘಾತಗಳಿಗೆ ಪ್ರಮುಖ ಕಾರಣ ಸ್ಥಳೀಯರು ಆರೋಪಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಕಾರು ನಿಯಂತ್ರಣ ತಪ್ಪಿ ಫ್ಲೈಓವರ್‌ನ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಮಳೆಯ ನೀರಿನಿಂದ ರಸ್ತೆ ಜಾರುವಂತಾಗಿದ್ದರಿಂದ ಕಾರು ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಸುರಕ್ಷತಾ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ ಅದರಲ್ಲಿ ಇದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಪಘಾತದ ಬಳಿಕ ರಸ್ತೆಯ ಮೇಲೆ ಇಂಧನ ಹಾಗೂ ನೀರು ಮಿಶ್ರಣಗೊಂಡು ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.

ಫ್ಲೈಓವರ್ ಮೇಲಿನ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ರಸ್ತೆ ಮಧ್ಯಭಾಗದಲ್ಲಿ ನೀರು ಸಂಗ್ರಹವಾಗಿ ಕೃತಕ ಹೊಂಡ ನಿರ್ಮಾಣವಾಗುತ್ತಿದೆ. ವೇಗವಾಗಿ ಸಂಚರಿಸುವ ವಾಹನ ಸವಾರರಿಗೆ, ಚಾಲಕರಿಗೆ ಈ ದೋಷ ಗೋಚರಿಸದೆ ವಾಹನಗಳು ನಿಯಂತ್ರಣ ತಪ್ಪುತ್ತಿವೆ ಎಂದು ದೂರಿದ್ದಾರೆ.

ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಥವಾ ಸಂಬಂಧಪಟ್ಟ ಆಡಳಿತದಿಂದ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಲಾಗಿಲ್ಲ. ಅಪಘಾತ ಸಂಭವಿಸುವ ಸ್ಥಳದಲ್ಲಿ ಎಚ್ಚರಿಕೆ ಫಲಕಗಳನ್ನೂ ಅಳವಡಿಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top