ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್: ಆರೋಪಿಗಳ ಬಂಧನ

Picture of RB NEWS

RB NEWS

Bureau Report

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನಲ್ಲಿ ಬಾಲಕಿ ಮೇಲೆ ಬೇರೆ ಬೇರೆ ಸಮಯದಲ್ಲಿ ಮೂವರು ಯುವಕರು  ಅತ್ಯಾಚಾರವೆಸಗಿದ ಪರಿಣಾಮ  ಸಂತ್ರಸ್ತೆ  ಇದೀಗ ಆರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್ ಹಾಗೂ ಪೋಕ್ಸೋ ಅಡಿಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.


ಪ್ರಕರಣ ಸಂಬಂಧಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ‌ .   ಮೂಡಬಿದ್ರೆ ನಿವಾಸಿಗಳಾದ ಮಹಮ್ಮದ್ ಇಕ್ಬಾಲ್(26), ಫಾರೂಕ್(19) ಹಾಗೂ 18 ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.


ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18.5 ವಯಸ್ಸಿನ ಬಾಲಕಿಗೆ ಮೂವರು ಯುವಕರು ಬೇರೆ ಬೇರೆ ಸಮಯದಲ್ಲಿ ಬಲತ್ಕಾರ ಮಾಡಿ ಅತ್ಯಾಚಾರ ಎಸೆದಿದ್ದಾರೆ. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಾಲಕಿ ಮೇ.31 ರಂದು ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಗ್ಯಾಂಗ್ ರೇಪ್ ಮತ್ತು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಇಂದು ಮೂವರನ್ನು ಬಂಧಿಸಲಾಗಿದೆ. ಈ ಪೈಕಿ ಇಬ್ಬರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನು ಅಪ್ರಾಪ್ತ ಬಾಲಕನನ್ನು ಮಂಗಳೂರು ಬಾಲನ್ಯಾಯಾಲಕ್ಕೆ ಹಾಜರುಪಡಿಸಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top