ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನೊಬ್ಬ ತನ್ನ ಶಾಲೆಯ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಅತ್ಯಾಚಾರ ಎಸೆಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ತಮ್ಮ ಶಾಲೆಯಲ್ಲಿ ಓದುತ್ತಿದ್ದ 7ನೇ ತರಗತಿ ವಿದ್ಯಾರ್ಥಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಬಾಲಕಿ ದೂರು ನೀಡಿದ್ದು, ಮುಖ್ಯ ಶಿಕ್ಷಕ ವೆಂಕಟೇಶನನ್ನು ಬಂಧಿಸಲಾಗಿದೆ.
ಶಾಲೆಯ ಬಾಲಕಿಯ ಮೈ-ಕೈ, ಎದೆ ಭಾಗವನ್ನು ಮುಟ್ಟಿ ಮಾತನಾಡುತ್ತಿದ್ದನಂತೆ. ಇದಕ್ಕೆ ಬಾಲಕಿ ವಿರೋಧ ವ್ಯಕ್ತಪಡಿಸಿದಾಗ, ಏನು ತೊಂದರೆ ಆಗುವುದಿಲ್ಲ ಎಂದೇಳಿ ಆಫೀಸ್ ರೂಮಿನೊಳಗೆ ಕರೆದುಕೊಂಡು ಅತ್ಯಾಚಾರವೆಸಗಿದ್ದಾನೆ. ನಂತರ ನಡೆದ ಯಾವ ವಿಚಾರವನ್ನು ಯಾರ ಜತೆಗೂ ಹೇಳದಂತೆ ಬೆದಿರಿಕೆ ಹಾಕಿದ್ದಾನೆ.
ವೆಂಕಟೇಶ್ 7ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆಕೆ ಮೂರು ತಿಂಗಳ ಗರ್ಭಿಣಿ ಆದಾಗಲೇ ಪ್ರಕರಣ ಬೆಳಕಿಗೆ ಬಂದಿದೆ. ಮಗಳು ಗರ್ಭಿಣಿಯಾಗಿದ್ದು ತಿಳಿದು ಪಾಲಕರು ಆತಂಕಕ್ಕೆ ಒಳಗಾಗಿದ್ದಾರೆ. ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆಯಿಂದ ವಿದ್ಯಾರ್ಥಿನಿಯನ್ನು ರಕ್ಷಿಸಿ ಆಪ್ತ ಸಮಾಲೋಚನೆ ಮಾಡಲಾಗುತ್ತಿದೆ.
ಅಪ್ರಾಪ್ತ ನೀಡಿರುವ ಹೇಳಿಕೆ ಮೇರೆಗೆ ಆರೋಪಿ ಶಿಕ್ಷಕನ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದನಾಯಕನಹಳ್ಳಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ ಸಂತ್ರಸ್ತೆಗೆ 1 ವರ್ಷದಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಕಳೆದ ಐದು ತಿಂಗಳಿಂದ ಮುಟ್ಟಾಗದೇ ಇರುವುದರಿಂದ ಆತಂಕಗೊಂಡ ಬಾಲಕಿ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಗರ್ಭಿಣಿಯಾಗಿರುವುದಾಗಿ ತಿಳಿಸಿದ್ದಾರೆ. ಸದ್ಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಶಿಕ್ಷಕ ವೆಂಕಟೇಶ್ ವಿರುದ್ಧ ಪೋಕೋ 376 ಅಡಿ ಅತ್ಯಾಚಾರ ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರಿಸಿದ್ದಾರೆ.






































