ಆನ್ ಲೈನ್ ಟ್ರೇಡಿಂಗ್ ಮೋಸ 4 ಮಂದಿ ಆರೋಪಿಗಳ ಬಂಧನ ರೂ. 13,00,000- ನಗದು ವಶ

Picture of RB NEWS

RB NEWS

Bureau Report

ಉಡುಪಿ: ಉಪೇಂದ್ರಭಟ್ ರವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸಪ್ ನಲ್ಲಿ ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್‌ಗೆ ಸೇರಿಸಿದ್ದು, ಮೋತಿಲಾಲ್ ಬನ್ಹಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ನ VIP-203-845 ಎಂಬ ಅಕೌಂಟ್ ನಂಬರನ್ನು ನೀಡಿರುತ್ತಾರೆ.

ಮೊ.ನಂ 7842874635 ಮತ್ತು 6391854496 ನೇದರಿಂದ ವಾಟ್ಸಪ್ ನಲ್ಲಿ ಟ್ರೇಡಿಂಗ್ ಬಗ್ಗೆ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ ಪಿರ್ಯಾದಿದಾರರನ್ನು ನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ,ಒಟ್ಟು ರೂ. 33,10,000 ಹಣವನ್ನು ಡಿಪಾಸಿಟ್ ಮಾಡಿಸಿಕೊಂಡಿರುತ್ತಾರೆ.

ಈ ಬಗ್ಗೆ ಉಪೇಂದ್ರಭಟ್ ರವರು ನೀಡಿದ ದೂರಿನಂತೆ ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 62/2024 ಕಲಂ: 66(C) 66(D) ಐ.ಟಿ. ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಸದ್ರಿ ಪ್ರಕರಣದ ಪ್ರಮುಖ ಸೂತ್ರದಾರಿಗಳು ತಲೆಮರೆಸಿ ಕೊಂಡಿದ್ದು ಅವರ ದಸ್ತಗಿರಿಗೆ ಬಾಕಿ ಇರುತ್ತದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top