ಆಮಂತ್ರಣ ಪತ್ರಿಕೆ ಬಿಡುಗಡೆ

Picture of RB NEWS

RB NEWS

Bureau Report

ಕಾರ್ಕಳ : ಕಡ್ತಲ ಗ್ರಾಮೀಣ ಕಾಂಗ್ರೆಸ್ ಹಾಗೂ ಉದಯ್ ಶೆಟ್ಟಿ ಅಭಿಮಾನಿ ಬಳಗ ಕಡ್ತಲ, ಕುಕ್ಕುಜೆ, ಎಳ್ಳಾರೆ ಇವರ ಜಂಟಿ ಆಶ್ರಯದಲ್ಲಿ ಡಿ. 21ರಂದು ದೊಂಡೇರಂಗಡಿ “ಕಲ್ಲಜಾಲು ಮೈದಾನ”ದಲ್ಲಿ ನಡೆಯಲಿರುವ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ “ಸೌಹಾರ್ದ ಟ್ರೋಫಿ” 2024-25 ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಎಳ್ಳಾರೆ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಜರುಗಿತು.

ಹೆಬ್ರಿ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಗೋಪಿನಾಥ್ ಭಟ್ ಮುನಿಯಲು, ಕಡ್ತಲ ಗ್ರಾಮೀಣ ಕಾಂಗ್ರೇಸ್ ಅಧ್ಯಕ್ಷ ಜಗದೀಶ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ರಾಘವ ದೇವಾಡಿಗ, ಭೂ ನ್ಯಾಯ ಮಂಡಳಿ ಸದಸ್ಯರು ರಾಘವ ಕುಕ್ಕುಜೆ, ಕಡ್ತಲ ಗ್ರಾಮ ಪಂಚಾಯತ್ ಸದಸ್ಯರಾದ ದೀಕ್ಷಿತ್ ಶೆಟ್ಟಿ, ರೇಖಾ ಸತೀಶ್, ಸೌಹಾರ್ದ ಟ್ರೋಫಿ 2024-25 ರ ಕಾರ್ಯಕಾರಿ ಸಮಿತಿ ಅಧ್ಯಕ್ಷ ಸಂಪತ್ ಪೂಜಾರಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರೆಲ್ಲರೂ ಉಪಸ್ಥಿತರಿದ್ದರು

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top