ಆರೋಗ್ಯಭರಿತ ಜೀವನವು ಉತ್ತಮ ಸಮಾಜಕ್ಕೆ ದಾರಿದೀಪ

Picture of RB NEWS

RB NEWS

Bureau Report

ಕಾರ್ಕಳ: ಆರೋಗ್ಯಭರಿತ ಜೀವನವು ಉತ್ತಮ ಸಮಾಜಕ್ಕೆ ದಾರಿದೀಪವಾಗಿದೆ. ಏಡ್ಸ್ ಅಥವಾ ಇನ್ನಾವುದೇ ಕಾಯಿಲೆಯು ಬರದಂತೆ ಎಚ್ಚರವಹಿಸುವುದು ವ್ಯಕ್ತಿಯ ಜವಾಬ್ದಾರಿಯೂ ಆಗಿದೆ ಎಂದು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಕೋಮಲ ಆರ್.ಸಿ. ಅಭಿಮತ ವ್ಯಕ್ತಪಡಿಸಿದರು.

ಕಾರ್ಕಳ ಲಯನ್ಸ್ ಕ್ಲಬ್ ನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ (ರಿ.) ಕಾರ್ಕಳ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲಯನ್ಸ್ ಕ್ಲಬ್ ಕಾರ್ಕಳ, ಕ್ರಿಯೇಟಿವ್ ಕಾಲೇಜು ಕಾರ್ಕಳ, ಶ್ರೀ ಶಿರ್ಡಿ ಸಾಯಿ ಪ್ರಥಮ ದರ್ಜೆ ಕಾಲೇಜು ಕಾರ್ಕಳ ಇದರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ವಿಶ್ವ ಏಡ್ಸ್ ದಿನಾಚರಣೆ ಸಲುವಾಗಿ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶ್ರೀ ಸಂದೀಪ್ ಕುಡ್ವ ಪ್ರಾಸ್ತಾವಿಕವಾಗಿ ಮಾತನಾಡಿ ಜಾಗೃತಿಯೊಂದಿಗೆ ಜೀವನ ಸಾಗಿಸುವುದು ಮುಖ್ಯವಾಗಿದೆ ಎಂದ ಅವರು ಜಿಲ್ಲೆಯಲ್ಲಿ ಏಡ್ಸ್ ರೋಗವನ್ನು ನಿಯಂತ್ರಿಸಿದ ಬಗ್ಗೆ ಅಂಕಿ ಅಂಶಗಳ ಸಹಿತ ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕಾರ್ಕಳ ನ್ಯಾಯವಾದಿಗಳ ಸಂಘ (ರಿ.)ದ ಕೋಶಾಧಿಕಾರಿ
ಎಚ್. ಅರುಣ್ ಕುಮಾರ್ ಶೆಟ್ಟಿ ಮಾತನಾಡಿ, 1988ರಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ಆಚರಣೆಯು ಪ್ರಥಮವಾಗಿ ಜಾರಿಗೆ ಬಂತು ಎಂದು ತಿಳಿಸಿದರು.

ಸರಕಾರಿ ಸಾರ್ವಜನಿಕ ಆಸ್ಪತ್ರೆ ಆಪ್ತ ಸಮಾಲೋಚಕಿ ಬಿಂದಿಯಾ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಏಡ್ಸ್ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಲಯನ್ಸ್ ಕ್ಲಬ್ ಅಧ್ಯಕ್ಷ ನಿತ್ಯಾನಂದ ಭಂಡಾರಿ, ಶ್ರೀ ಶಿರ್ಡಿ ಸಾಯಿ ಪ್ರಥಮ ದರ್ಜೆ ಕಾಲೇಜಿನ ಸಂಚಾಲಕ ಆಶಿಶ್ ಶೆಟ್ಟಿ, ಕ್ರಿಯೇಟಿವ್ ಕಾಲೇಜಿನ ಉಪನ್ಯಾಸಕ ಉಮೇಶ್, ಮೆಸ್ಕಾಂ ಅಧಿಕಾರಿ, ಲಯನ್ಸ್ ಜಿಲ್ಲೆ 317ರ ಕಾರ್ಯದರ್ಶಿ ಗಿರೀಶ್ ರಾವ್ ರವರು ಉಪಸ್ಥಿತರಿದ್ದರು.

ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಸ್ವಾಗತಿಸಿ, ನಿರೂಪಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top