ಇಬ್ಬರ ಮೇಲೆ ತಲವಾರು ದಾಳಿ: ಓರ್ವ ದಾರುಣ ಅಂತ್ಯ

Picture of RB NEWS

RB NEWS

Bureau Report

ಮಂಗಳೂರು : ಬಂಟ್ವಾಳ ತಾಲ್ಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಮಂಗಳವಾರ ಯುವಕನೊಬ್ಬನ ಹತ್ಯೆ ನಡೆದಿದೆ.

ಕೊಳತ್ತಮಜಲು ನಿವಾಸಿ ರಹೀಂ (34) ಎಂಬವರು ಹತ್ಯೆಗೀಡಾಗಿದ್ದು, ಇರಾಕೋಡಿಯಲ್ಲಿ ಪಿಕಪ್ ವಾಹನದಿಂದ ಮರಳನ್ನು ಇಳಿಸುವ ಸಂದರ್ಭದಲ್ಲಿ, ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ದಾಳಿಯ ಸಂದರ್ಭದಲ್ಲಿ ರಹೀಂ ಜೊತೆ ಶಾಫಿ ಸ್ಥಳದಲ್ಲಿದ್ದು, ಆತನ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಗಂಭೀರ ರೀತಿಯಲ್ಲಿ ಗಾಯಗೊಂಡ ಶಾಫಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top