ಈಜಲು ಹೋಗಿ ನೀರು ಪಾಲು!

Picture of RB NEWS

RB NEWS

Bureau Report

ಕಾರ್ಕಳ : ದುರ್ಗಾ ಫಾಲ್ಸ್‌ಗೆ ಈಜುಲು  ಹೋದ  ವಿದ್ಯಾರ್ಥಿಯೋರ್ವ ನೀರು ಪಾಲಾದ  ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಜಾಯಲ್ ಡಯಾಸ್ (19) ಎಂದು ಗುರುತಿಸಲಾಗಿದೆ. ಉಡುಪಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಂ. ಪದವಿ ವ್ಯಾಸಂಗ ಮಾಡುತ್ತಿದ್ದನು.

7 ಮಂದಿ ವಿದ್ಯಾರ್ಥಿಗಳ ತಂಡ ದುರ್ಗಾ ಫಾಲ್ಸ್‌ ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜಾಯಲ್ ಡಯಾಸ್ ಆಯ ತಪ್ಪಿ ನೀರು ಪಾಲಾಗಿದ್ದಾನೆ ಎಂದು ತಿಳಿದುಬಂದಿದೆ.
ಕಾರ್ಕಳ ಗ್ರಾಮಾಂತರ ಹಾಗೂ ಕಾರ್ಕಳ ನಗರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.‌

ಶವ ಪತ್ತೆಯಾದ ಜಾಗವು ನಗರ ಠಾಣಾ ವ್ಯಾಪ್ತಿ ಗೆ ಬರುವುದರಿಂದ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top