ಬಿಜೆಪಿಯಿಂದ ಈಶ್ವರಪ್ಪ ಉಚ್ಚಾಟನೆ

Picture of RB NEWS

RB NEWS

Bureau Report

ಬೆಂಗಳೂರು : ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಅದೇಶ ಹೊರಡಿಸಿದೆ.

ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ನಾಮಪತ್ರ ಹಿಂದಕ್ಕೆ ಪಡೆಯುವಂತೆ ಬಿಜೆಪಿ ನಾಯಕರು ಈಶ್ವರಪ್ಪ ಅವರನ್ನು ಮನ ಒಲಿಸುವ ಪ್ರಯತ್ನ ಮಾಡಿದ್ದರು. ಆದರೆ ಈಶ್ವರಪ್ಪ ಕಣದಿಂದ ಹಿಂದಕ್ಕೆ ಸರಿಲಿಲ್ಲ.  ಇಂದು ನಾಮಪತ್ರವನ್ನು ಹಿಂದಕ್ಕೆ ಪಡೆಯದ ಕಾರಣ ಬಿಜೆಪಿ ಶಿಸ್ತುಕ್ರಮ ಕೈಗೊಂಡಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top