ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ
ಉಡುಪಿ : ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ ರವರು ಇಂದು ಪೂರ್ವಾಹ್ನ ಅಧಿಕಾರವನ್ನು ನಿಕಟ ಪೂರ್ವ ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ನಾಗರಾಜ ನಾಯಕ್ ರವರಿಂದ ಅಧಿಕಾರ ಸ್ವೀಕರಿಸಿದರು.

ಅವರು ಈ ಹಿಂದೆ ವಿಜಯಪುರ ಜಿಲ್ಲೆಯ ಇಂಡಿ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.





































