ಉತ್ತರಪ್ರದೇಶ: ಹಾಪುರದಲ್ಲಿ ಪೊಲೀಸರ ಎನ್ ಕೌಂಟರ್: ಲಾರೆನ್ಸ್ ಬಿಷ್ಟೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್ ಹತ

Picture of RB NEWS

RB NEWS

Bureau Report

ಲಖನೌ: ಉತ್ತರಪ್ರದೇಶದ ಹಾಪುರದಲ್ಲಿ ಪೊಲೀಸರು ಎನ್ ಕೌಂಟ‌ರ್ ನಡೆಸಿದ್ದು, ಲಾರೆನ್ಸ್ ಬಿಷ್ಟೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್ ನವೀನ್ ಕುಮಾರ್‌ನನ್ನು ಹತ್ಯೆ ಮಾಡಿದ್ದಾರೆ.

ಹಾಪುರ್‌ನ ಥಾನಾ ಕೊಟ್ಟಾಲಿ ಪ್ರದೇಶದಲ್ಲಿ ಬುಧವಾರ ತಡರಾತ್ರಿ ಎನ್ನೊಂಟರ್ ನಡೆಸಲಾಗಿದ್ದು, ಲಾರೆನ್ಸ್ ಬಿಟ್ಟೋಯ್‌ ಗ್ಯಾಂಗ್‌ನ ಪ್ರಮುಖ ಸದಸ್ಯ, ಗಾಜಿಯಾಬಾದ್‌ನ ಲೋನಿ ನಿವಾಸಿ ನವೀನ್ ಕುಮಾರ್‌ನನ್ನು ಹತ್ಯೆ ಮಾಡಿರುವುದಾಗಿ ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಕೊತ್ವಾಲಿಯಲ್ಲಿ ಬಿಷ್ಟೋಯ್ ಗ್ಯಾಂಗ್ ಇರುವ ಖಚಿತ ಮಾಹಿತಿಯನ್ನಾಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಬಿಷ್ಟೋಯ್ ಗ್ಯಾಂಗ್ ಪೊಲೀಸರ ಮೇಲೆ ಪ್ರತಿದಾಳಿ ಮಾಡಿದ್ದರು.

ಈ ವೇಳೆ ಗ್ಯಾಂಗ್‌ನ ಶಾರ್ಪ್‌ಶೂಟರ್ ನವೀನ್‌ ಕುಮಾರ್‌ಗೆ ಗಂಭೀರ ಗಾಯಗಳಾಗಿದ್ದವು. ಬಳಿಕ ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ, ನೋಯ್ಡಾ ಘಟಕ ಮತ್ತು ದೆಹಲಿ ಪೊಲೀಸರ ವಿಶೇಷ ಘಟಕದ ಜಂಟಿ ತಂಡಗಳು ಸೇರಿ ಈ ಕಾರ್ಯಾಚರಣೆ ನಡೆಸಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಎನೌಂಟರ್ ನಲ್ಲಿ ಹತ್ಯೆಯಾಗಿರುವ ನವೀನ್ ಮೇಲೆ ದೆಹಲಿಯ ಥಾನಾ ಫರ್ಶ್ ಬಜಾರ್‌ನಲ್ಲಿ ಕೊಲೆ, ದರೋಡೆ, ಅಪಹರಣ ಸೇರಿ 20ಕ್ಕೂ ಪ್ರಕರಣ ದಾಖಲಾಗಿದ್ದವು. ಈ ಹಿಂದೆ ದೆಹಲಿಯಲ್ಲಿ ಪ್ರಕರಣದಲ್ಲಿ ನವೀನ್ ಜೈಲು ಶಿಕ್ಷೆ ಅನುಭವಿಸಿದ್ದ ಎಂದು ವರದಿಗಳು ತಿಳಿಸಿವೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top