ಎಂ ಎಲ್ ಸಿ ಸ್ಥಾನಕ್ಕೆ ನಂಜುಂಡಿ ರಾಜೀನಾಮೆ

Picture of RB NEWS

RB NEWS

Bureau Report

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ. ನಂಜುಂಡಿ ಅವರು ಇಂದು ರಾಜೀನಾಮೆ ನೀಡಿದ್ದು, ಈ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ. 

ಕೆ.ಪಿ ನಂಜುಂಡಿ ಅವರು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಗೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ. ನಿರ್ಲಕ್ಷ್ಯಕ್ಕೊಳಗಾದ‌ ಕಾಯಕ ಸಮಾಜದ ಏಳಿಗೆಗೆ ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ ಬಂದೆ. ಆದರೆ, ಪಕ್ಷದ ಮುಖಂಡರು ಒಂದು ದಿನವೂ ಕಾಯಕ ಸಮಾಜದ ಬಗ್ಗೆ ಮಾತನಾಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮುದಾಯಕ್ಕೆ ಯಾವುದೇ ರೀತಿ ಸ್ಪಂದಿಸಿಲ್ಲ. ನನ್ನನ್ನು ಎಂಎಲ್‌ಸಿ ಮಾಡಿ ಸುಮ್ಮನಾದರು, ಏನೂ ಜವಾಬ್ದಾರಿ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top