
ಎಡನೀರು ಮಠದ ಶ್ರೀಗಳಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು : ಶಾಸಕ ಸುನೀಲ್ ಕುಮಾರ್
ಕಾರ್ಕಳ : ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರಿದ್ದ ಕಾರಿನ ಮೇಲೆ ದಾಳಿ ನಡೆದಿರುವುದು ಅತ್ಯಂತ ಖಂಡನೀಯ ಎಂದು ಶಾಸಕ ಸುನೀಲ್ ಕುಮಾರ್ ಹೇಳಿಕೆ ತಿಳಿಸಿದ್ದಾರೆ
ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ – ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿಗೆ ಹಾನಿ ಮಾಡಿರುತ್ತಾರೆ.
ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ವಾಹನದ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕು. ಕೇರಳ ಸರ್ಕಾರವು ಶ್ರೀಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.































