ಎರುಗುಂಡಿ ಫಾಲ್ಸ್ ನಲ್ಲಿ “ನೀರಾಟ”ವಾಡಿದ ಪ್ರವಾಸಿಗರು : ಜೀವ ರಕ್ಷಿಸಿದ ಸ್ಥಳೀಯರು

Picture of RB NEWS

RB NEWS

Bureau Report

ಮೂಡುಬಿದಿರೆ : ಮುಂಗಾರು ಪೂರ್ವದಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಕರಾವಳಿಯ  ನದಿ, ತೊರೆಗಳು ಉಕ್ಕಿ ಹರಿಯುತ್ತಿದೆ.  ಈ ಎಲ್ಲಾ ವಿದ್ಯಾಮಾನದ ನಡುವೆ ಮೂಡಬಿದಿರೆ ಸಮೀಪದ ಪಾಲಡ್ಕ ಎರುಗುಂಡಿ ಫಾಲ್ಸ್ ನಲ್ಲಿ ಪ್ರವಾಸಿಗರು ಮೋಜಿನಾಟದಲ್ಲಿ ನಿರತರಾಗಿದ್ದ ವೇಳೆ ಅಪಾಯಕ್ಕೆ ಸಿಲುಕಿದ್ದ ಪ್ರವಾಸಿಗರನ್ನು ಸ್ಥಳೀಯರು ರಕ್ಷಿಸಿದ ಘಟನೆ ಆದಿತ್ಯವಾರ ನಡೆದಿದೆ.


ಪ್ರವಾಸಿಗರನ್ನು ಸ್ಥಳೀಯರು ರಕ್ಷಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಪರಿಸರದಲ್ಲಿ ಈ ಹಿಂದೆ ಕೂಡ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಪೊಲೀಸ್ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಇಲ್ಲಿಗೆ ಮೋಜಿನಾಟಕ್ಕೆ ಬರುವ ಪ್ರವಾಸಿಗರನ್ನು ಎಚ್ಚರಿಸುವ ಕಾರ್ಯ ಮಾಡಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top