ಐತಿಹಾಸಿಕ ಮಹತ್ವದ ತೀರ್ಪು: ಪ್ರಕರಣವೊಂದರಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆ

Picture of RB NEWS

RB NEWS

Bureau Report

ಜೀವಾವಧಿ ಶಿಕ್ಷೆಗೊಳಗಾದ 98 ಆರೋಪಿಗಳಿಗೆ ತಲಾ ಐದು ಸಾವಿರ ರೂ ಹಾಗೂ ಇನ್ನು ಮೂವರು ಅಪರಾಧಿಗಳಿಗೆ ತಲಾ ಎರಡು ಸಾವಿರ ದಂಡ ವಿಧಿಸಿದೆ.

2014 ರ ಆಗಸ್ಟ್ 28 ರಂದು ನಡೆದಿದ್ದ ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು. ಇನ್ನು ಮೊನ್ನೆ ಅಂದರೆ ಅಕ್ಟೋಬರ್ 21 ರಂದು ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, 101 ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಪು ನೀಡಿ (ಅಕ್ಟೋಬರ್ 24) ಶಿಕ್ಷೆ ಪ್ರಮಾಣ ತೀರ್ಪು ಕಾಯ್ದಿರಿಸಿತ್ತು. ಇದೀಗ ಕೋರ್ಟ್ ಅಂತಿಮ ತೀರ್ಪು ನೀಡಿದ್ದು, ಅಪರಾಧಿಗಳ ಕುಟುಂಬಸ್ಥರು ಕೋರ್ಟ್ ಆವರಣದಲ್ಲೇ ಕಣ್ಣಿರು ಹಾಕಿದರು.

ಮರಕುಂಬಿ ಗ್ರಾಮದಲ್ಲಿ ಸವರ್ಣೀಯರು ಮತ್ತು ದಲಿತರ ನಡುವೆ ದೊಡ್ಡ ಮಟ್ಟದ ಘರ್ಷಣೆಗೆ ಕಾರಣ, ಗ್ರಾಮದಲ್ಲಿದ್ದ ಅಸ್ಪೃಶ್ಯತೆ. ಹೌದು.. ಗ್ರಾಮದಲ್ಲಿ ಸವರ್ಣೀಯರು ನಡೆಸುತ್ತಿದ್ದ ಅಸ್ಪೃಶ್ಯತೆಯನ್ನು ಗ್ರಾಮದ ದಲಿತರು ಖಂಡಿಸಿದ್ದರು. ಇದರಿಂದ ಸವರ್ಣೀಯರು ಮತ್ತು ದಲಿತರ ನಡುವೆ ಆರೋಪ, ಪ್ರತ್ಯಾರೋಪ, ದೂರು ಪ್ರತಿದೂರು ನೀಡುವುದು ನಡದೇ ಇತ್ತು.

ಆದ್ರೆ ಆಗಸ್ಟ್ 28, 2014 ರಂದು ಗಂಗಾವತಿ ನಗರದಲ್ಲಿರುವ ಶಿವ ಚಿತ್ರಮಂದಿರದಲ್ಲಿ ಇದೇ ಮರಕುಂಬಿ ಗ್ರಾಮದ ಮಂಜುನಾಥ ಮತ್ತು ಸ್ನೇಹಿತರು ಪವರ್ ಸಿನಿಮಾ ನೋಡಲು ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್ ಪಡೆಯೋ ವಿಚಾರದಲ್ಲಿ ಜಗಳ ಆರಂಭವಾಗಿತ್ತು. ಮಂಜುನಾಥ್‌ ಮತ್ತು ಸ್ನೇಹಿತರು, ನಮ್ಮೂರಿನ ದಲಿತರು ನಮ್ಮ ಮೇಲೆ ಹಲ್ಲೆ ಮಾಡಿಸಿದ್ದಾರೆ ಅಂತ ಗ್ರಾಮದಲ್ಲಿ ಹೇಳಿದ್ದ. ಇದು ಸವರ್ಣೀಯ ಕುಟುಂಬಗಳ ಆಕ್ರೋಶಕ್ಕೆ

ಹೇಳಿದ್ದ. ಇದು ಸವರ್ಣೀಯ ಕುಟುಂಬಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಅಂದು ಸಂಜೆ ಗ್ರಾಮದ ಸವರ್ಣೀಯರು, ದಲಿತರ ಕೇರಿಗೆ ನುಗ್ಗಿ ದಾಂದಲೆ ಮಾಡಿ, ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top