ಒಂದು ಹನಿ ರಕ್ತವೂ ಅಮೂಲ್ಯ: ಉಡುಪಿ ಎಸ್.ಪಿ ಡಾ.ಅರುಣ್.ಕೆ

Picture of RB NEWS

RB NEWS

Bureau Report

ಉಡುಪಿ: ರಕ್ತ ಸಂಗ್ರಹ ರಕ್ತದ ಕೊರತೆ ನೀಗಿಸುವ ನಿಟ್ಟಿನಲ್ಲಿ ರಕ್ತದಾನ ಶಿಬಿರಗಳು ವ್ಯಾಪಕವಾಗಿ ನಡೆಯಬೇಕು. ಪ್ರತಿ ಆರು ತಿಂಗಳಿಗೊಮ್ಮೆ ಇಲಾಖಾ ವತಿಯಿಂದ ರಕ್ತದಾನ ಶಿಬಿರ ನಡೆಯುವಂತಾಗಬೇಕು. ರಕ್ತದಾನದಿಂದ ಯಾವುದೇ ರೀತಿಯಲ್ಲಿ ಅಡ್ಡಪರಿಣಾಮ ಬೀರುವುದಿಲ್ಲ. ಬದಲಾಗಿ ಓರ್ವ ವ್ಯಕ್ತಿಗೆ ಅತೀ ಅವಶ್ಯಕ ಸಂದರ್ಭದಲ್ಲಿ ರಕ್ತ ನೀಡಿವದರಿಂದ ಮರುಜೀವ ನೀಡಿದಂತಾಗುವುದು ಎಂದು ಉಡುಪಿ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಹೇಳಿದ್ದಾರೆ.

ಸಶಸ್ತ್ರ ಮೀಸಲು ಪೊಲೀಸ್ ಉಡುಪಿ 1999ರ ತಂಡ ಇವರ ರಜತ ಸಂಭ್ರಮದ ಪ್ರಯುಕ್ತ, ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ಡಿಎಆರ್ ಕೇಂದ್ರ ಕಛೇರಿಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

“ಸಾಮಾಜಿಕ ಸತ್ಕಾರ್ಯಗಳಿಂದ ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯ ವೃದ್ಧಿಸಿದಂತಾಗುವುದು“

–ಡಾ. ಅರುಣ್ ಕೆ
ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ

25 ವರ್ಷಗಳ ಪೊಲೀಸ್ ಸೇವೆ ಅಭಿನಂದಿಯವಾಗಿದ್ದು ಸಮಾಜಕ್ಕೆ ನೀಡಿರುವ ಸೇವೆಯೊಂದಿಗೆ ರಕ್ತದಾನದ ಕಾರ್ಯದಲ್ಲಿ ಕೈಜೋಡಿಸಿರುವುದು ಶ್ಲಾಘನೀಯ. ರಕ್ತದಾನದಿಂದ ಆರೋಗ್ಯ ವೃದ್ಧಿಯಾಗಲಿದ್ದು ಈ ಮೂಲಕ ಸಮಾಜಕ್ಕೆ ಮಾದರಿಯಾಗಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್, ಟಿ. ಸಿದ್ದಲಿಂಗಪ್ಪ ವಹಿಸಿದ್ದರು.

ಕೆ.ಎಂ.ಸಿ ಮಣಿಪಾಲ ರಕ್ತನಿಧಿ ವಿಭಾಗದ ಮುಖ್ಯಸ್ಥ ಡಾ.ಶಮ್ಮಿ ಶಾಸ್ತ್ರೀ ಭಾಗವಹಿಸಿ, ರಕ್ತದಾನದ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಡಿಎಆರ್ ಡಿವೈಎಸ್ಪಿ ತಿಮ್ಮಪ್ಪ ಗೌಡ ಜಿ ಉಪಸ್ಥಿತರಿದ್ದರು.

ಡಿಎಆರ್ ಆರ್ ಪಿ ಐ ಎಸ್ ರವಿಕುಮಾರ್ ಸ್ವಾಗತಿಸಿ ಡಿ ಎ ಆರ್ ಎ ಆರ್ ಎಸ್ ಐ ಬಾಲಸುಬ್ರಹ್ಮಣ್ಯ ವಂದಿಸಿದರು.

ಯೋಗೇಶ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ಡಿ ಎ ಆರ್ ಸಿಬಂದಿಗಳು, ಪೊಲೀಸ್ ಸಿಬಂದಿಗಳು ರಕ್ತದಾನ ಮಾಡಿದರು.

ಈ ಶಿಬಿರದಲ್ಲಿ ಡಿಎಆರ್ ಕೇಂದ್ರ ಕಚೇರಿಯ ಸುಮಾರು 80 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ರಕ್ತದಾನ ಮಾಡಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top